ಮಕ್ಕಳು ಲಸಿಕೆ ಕಡ್ಡಾಯವಾಗಿ ಪಡೆಯಲು ಶಾಸಕ ವೆಂಕಟರಾವ ನಾಡಗೌಡ ಸಲಹೆ

040122 RH No.03 Corona Vaccine Campaign Program
ಸಿಂಧನೂರು ತಾಲೂಕಿನ ಆರ್.ಎಚ್. ನಂ.3ರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಕರೊನಾ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ವೆಂಕಟರಾವ ನಾಡಗೌಡ ಮಾತನಾಡಿದರು.
Published on

ಸಿಂಧನೂರು: ಸರ್ಕಾರ ನಿಗದಿಪಡಿಸಿರುವ 15ರಿಂದ 18 ವರ್ಷ ವಯಸ್ಸಿನ ಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಆ ನಿಟ್ಟಿನಲ್ಲಿ ಶಾಲಾ, ಕಾಲೇಜ್‌ನವರು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಶಾಸಕ ವೆಂಕಟರಾವ ನಾಡಗೌಡ ಹೇಳಿದರು.

ತಾಲೂಕಿನ ಆರ್.ಎಚ್. ನಂ.3ರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ತಾಲೂಕು ಆಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕರೊನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. 18 ವರ್ಷ ಮೇಲ್ಪಟ್ಟವರ ಲಸಿಕೆ ನೀಡಿಕೆಯಲ್ಲಿ ಈಗಾಗಲೇ ಗುರಿ ಸಾಧಿಸಲಾಗಿದೆ. ಕರೊನಾದಿಂದ ಮುಕ್ತಿ ಪಡೆಯಲು ಲಸಿಕೆಯೊಂದೇ ಮಾರ್ಗವಾಗಿದೆ ಎಂದರು.

ತಹಸೀಲ್ದಾರ್ ಮಂಜುನಾಥ ಭೋಗಾವತಿ ಮಾತನಾಡಿ, ಲಸಿಕೆ ಅಭಿಯಾನ ಯಶಸ್ಸಿಗೆ ಎಲ್ಲರೂ ಕೈಜೋಡಿಸೋಣ ಎಂದರು. ಬಿಇಒ ಶರಣಪ್ಪ ವಟಗಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ ಪಾಟೀಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net