ದಢೇಸುಗೂರಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಶಾಸಕ ವೆಂಕಟರಾವ ನಾಡಗೌಡ ಚಾಲನೆ

21112020 Sindhanour MLA Venkatrao Nadagowda
Published on

ಸಿಂಧನೂರು: ದಢೇಸುಗೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿ ಗೃಹಗಳ ನಿರ್ಮಾಣಕ್ಕೆ ಶಾಸಕ ವೆಂಕಟರಾವ ನಾಡಗೌಡ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ, ವಿಶೇಷ ಅಭಿವೃದ್ಧಿ ಯೋಜನೆಯಡಿ 1.30 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಿದ್ದು ಎರಡು ವೈದ್ಯಾಧಿಕಾರಿ ವಸತಿಗೃಹ, ಎರಡು ಶ್ರೂಶಕಿ ವಸತಿ ಗೃಹ ನಿರ್ಮಾಣ ಮಾಡಲಾಗುವುದು ಎಂದ ಅವರು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ತಿಳಿಸಿದರು.

ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ತಹಸೀಲ್ದಾರ್ ಮಂಜುನಾಥ ಭೋಗಾವತಿ, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರಾಜ ಬಿ.ಪಾಟೀಲ್, ಡಾ.ಜೀವನೇಶ್ವರಯ್ಯ, ಪರಮೇಶ್ವರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net