ಅನ್ನದಾತ ಸಮುದಾಯಕ್ಕೆ ಮಾಡಿದ ಅವಮಾನ

310522 Alliance of Progressive Organizations in Sindhanur Protest
ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ತಾಲೂಕು ಅಧ್ಯಕ್ಷ ಹುಸೇನಬಾಷಾ ಮಾತನಾಡಿದರು.
Published on

ಸಿಂಧನೂರು: ರೈತ ನಾಯಕರ ಮೇಲೆ ಹಲ್ಲೆ ಮಾಡಿದ ಬಿಜೆಪಿ ಹಾಗೂ ಸಂಘ ಪರಿವಾರದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ವ್ಯವಸ್ಥಿತ ದಾಳಿಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ಮಂಗಳವಾರ ನಗರದ ತಾಲೂಕು ಆಡಳಿತಸೌಧ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರಿನ ಗಾಂಧಿಭವನದಲ್ಲಿ ರೈತ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಆತ್ಮಾವಲೋಕನ ಸಭೆ ನಡೆಯುವಾಗತಿ ರೈತ ನಾಯಕ ರಾಕೇಶ್ ಟಿಕಾಯತ್, ಯುದ್ದವೀರ್‌ಸಿಂಗ್, ಚುಕ್ಕಿ ನಂಜುಂಡಸ್ವಾಮಿ ಸೇರಿದಂತೆ ಮಹಿಳಾ ರೈತ ಮುಖಂಡರ ಮೇಲೆ ಬಿಜೆಪಿ-ಸಂಘ ಪರಿವಾರದ ಗೂಂಡಾಪಡೆಗಳು ಮಾರಣಾಂತಿಕ ಹಲ್ಲೆ ನಡೆಸಿ, ಮುಖಕ್ಕೆ ಮಸಿ ಎರಚಿದ್ದು ಖಂಡನೀಯವಾಗಿದೆ. ಇದು ಅನ್ನದಾತ ಸಮುದಾಯಕ್ಕೆ ಮಾಡಿದ ಅವಮಾನ. ಹೋರಾಟಗಾರರು, ಬುದ್ದಿಜೀವಿಗಳು, ಬರಹಗಾರರು, ಸಾಹಿತಿಗಳಿಗೆ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net