ಗ್ರಾಪಂ ನೂತನ ಸದಸ್ಯರು ಅಭಿವೃದ್ಧಿ ಕೆಲಸ ಮೂಲಕ ಜನಮೆಚ್ಚುಗೆ ಗಳಿಸಲಿ; ಶಾಸಕ ವೆಂಕಟರಾವ ನಾಡಗೌಡ ಕಿವಿಮಾತು

060121 Sindhanuru MLA Nadagouda Birthday
ಸಿಂಧನೂರಿನ ಯಲಮಂಚಲಿ ವಾಸುದೇವರಾವ್ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಶಾಸಕ ವೆಂಕಟರಾವ ನಾಡಗೌಡರ 64ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸನ್ಮಾನಿಸಿದರು.
Published on

ಸಿಂಧನೂರು: ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿ ಪರ ಕೆಲಸಗಳನ್ನು ಮಾಡುವ ಮೂಲಕ ನೂತನ ಸದಸ್ಯರು ಜನಮೆಚ್ಚುಗೆ ಗಳಿಸಬೇಕು. ಉದ್ಯೋಗ ಖಾತ್ರಿ ಯೋಜನೆಯ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ವೆಂಕಟರಾವ್ ನಾಡಗೌಡ ಹೇಳಿದರು.

ನಗರದ ಯಲಮಂಚಲಿ ವಾಸುದೇವರಾವ್ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸಂಜೆ ಜೆಡಿಎಸ್ ಬೆಂಬಲಿತ ಗ್ರಾಪಂ ನೂತನ ಸದಸ್ಯರಿಗೆ ಸನ್ಮಾನ ಹಾಗೂ ಅಭಿಮಾನಿಗಳು ಏರ್ಪಡಿಸಿದ್ದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆಯಿಂದ ಗ್ರಾಮೀಣ ಮಟ್ಟದಲ್ಲಿಯೂ ಗ್ರಾಪಂ ಸದಸ್ಯರಾಗುವ ವ್ಯವಸ್ಥೆ ಬಂದಿದೆ. ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ತರಬೇತಿ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡುತ್ತೇನೆ. ಇಲ್ಲದಿದ್ದರೆ ಪಿಡಿಒ, ಕಾರ್ಯದರ್ಶಿಗಳು ಹೇಳಿದ ಮಾತಿಗೆ ತಲೆಯಾಡಿಸಬೇಕಾಗುತ್ತದೆ. ಆದ್ದರಿಂದ ಸರ್ಕಾರದಿಂದ ಬರುವ ಅನುದಾನ, ಸೌಲಭ್ಯಗಳ ಕುರಿತು ಸಮಗ್ರವಾಗಿ ಮಾಹಿತಿ ತಿಳಿದುಕೊಂಡು ಗ್ರಾಮಗಳಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಲು ಮುಂದಾಗಬೇಕೆಂದು ತಿಳಿಸಿದರು.

ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಮುಖಂಡ ಅಶೋಕ ಉಮಲೂಟಿ ಮಾತನಾಡಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ವಿರೂಪಾಕ್ಷಿ, ಕಾರ್ಯಾಧ್ಯಕ್ಷ ಶಿವಶಂಕರ, ಮುಖಂಡರಾದ ಅಯ್ಯನಗೌಡ ಆಯನೂರು, ಬಸವರಾಜ ನಾಡಗೌಡ, ಚಂದ್ರಶೇಖರ ಮೈಲಾರ, ಬಿ.ಹರ್ಷ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net