ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಸ್‌ಐಒ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ

060122 Sindhanuru SIO Protest
ಸಿಂಧನೂರಿನ ತಹಸಿಲ್ ಕಚೇರಿ ಮುಂದೆ ಗುರುವಾರ ಎಸ್‌ಐಒದಿಂದ ಪ್ರತಿಭಟನೆ ನಡೆಸಲಾಯಿತು.
Published on

ಸಿಂಧನೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಪರಿಶೀಲಿಸಿ ಈಡೇರಿಸಬೇಕು ಎಂದು ಒತ್ತಾಯಿಸಿ ಎಸ್‌ಐಒದಿಂದ ಗುರುವಾರ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

440 ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 14,183 ಉಪನ್ಯಾಸಕರು ಕಳೆದ ಕೆಲವು ದಿನಗಳಿಂದ ಬೋಧನಾ ತರಗತಿ ತೊರೆದು ಬೇಡಿಕೆ ಈಡೇರಿಕೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿಕ್ಷಣವು ಸಂವಿಧಾನದ ಮೂಲಭೂತ ಹಕ್ಕಾಗಿದೆ. ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಅನೇಕ ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಡಿಮೆ ವೇತನಕ್ಕೆ ದುಡಿಸಿಕೊಳ್ಳಲಾಗುತ್ತಿದೆ. ಕೂಡಲೇ ಉಪನ್ಯಾಸಕರಿಗೆ ಗೌರವಧನ ಹೆಚ್ಚಳದ ಜತೆಗೆ ಉದ್ಯೋಗ ಭದ್ರತೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಅಸ್ಸಾರ್, ಅಬ್ಬರ್, ಅತಿಥಿ ಉಪನ್ಯಾಸಕರಾದ ಜಿ.ಮುದುಗಪ್ಪ, ಸಿದ್ದರಾಮೇಶ ಮುಕ್ಕುಂದ, ಮರಿಲಿಂಗಪ್ಪ, ಚಿದಾನಂದಪ್ಪ, ಚೆನ್ನಮಲ್ಲಿಕಾರ್ಜುನ, ಇಜಾಜ್ ಅಹಮ್ಮದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net