ನೀರಿನ ವಿಷಯದಲ್ಲಿ ಆರೋಪ ಸಲ್ಲ, ಶಾಸಕ ವೆಂಕಟರಾವ ನಾಡಗೌಡ ಹೇಳಿಕೆ

191122 Sindhanuru Road Work Bhoomi Pooja
ನಗರೋತ್ಥಾನ 3ನೇ ಹಂತದ ಯೋಜನೆಯಡಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.13ರ ಕುಷ್ಟಗಿ ಮುಖ್ಯರಸ್ತೆಯಿಂದ ಕನಕದಾಸ ಕಲ್ಯಾಣ ಮಂಟಪದವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ವೆಂಕಟರಾವ ನಾಡಗೌಡ ಚಾಲನೆ ನೀಡಿದರು.
Published on

ಸಿಂಧನೂರು: ಕೆಳ ಭಾಗಕ್ಕೆ ನೀರು ಹರಿಯುತ್ತಿಲ್ಲವೆಂದು ಕಾಂಗ್ರೆಸ್ ವಿನಾಕಾರಣ ಆರೋಪ ಮಾಡುತ್ತಿರುವುದು ಸರಿಯಲ್ಲ. ಈಗಾಗಲೇ ಟೇಲೆಂಡ್ ಭಾಗಕ್ಕೆ ನೀರು ಹರಿಸಿ ಜೋಳದ ಬೆಳೆ ರಕ್ಷಿಸಲಾಗಿದೆ ಎಂದು ಶಾಸಕ ವೆಂಕಟರಾವ ನಾಡಗೌಡ ಹೇಳಿದರು.

ನಗರದ ಕುಷ್ಟಗಿ ಮುಖ್ಯರಸ್ತೆಯಿಂದ ದೊಡ್ಡ ಕೆರೆವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ಸರ್ಕಾರಿಂದ 98.5 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶೀಘ್ರ ಕೆರೆ ದುರಸ್ತಿ ಕಾರ್ಯ ಆರಂಭಿಸಲಾಗುವುದು ಎಂದರು.

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತಾವು ಎಸ್ಪಿ ಸೇರಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ತನಿಖೆ ಚುರುಕುಗೊಳಿಸಿ ಆರೋಪಿಗಳ ಪತ್ತೆಗೆ ಸೂಚಿಸಿದ್ದೇನೆ. ಕಾಂಗ್ರೆಸ್‌ನವರು ವಿನಾಕಾರಣ ಹೋರಾಟ ನಡೆಸುತ್ತಿದ್ದಾರೆ. ಕೆಳಭಾಗದ ರೈತರಿಗೆ ನೀರು ತಲುಪಿದೆ. ಟೆಂಟ್‌ನಲ್ಲಿ ಕುಳಿತವರೆಲ್ಲರೂ ಅವರ ಅನುಯಾಯಿಗಳು. ರೈತರಲ್ಲ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net