ಸಂಘಟನೆಯಲ್ಲಿ ಸಾಮಾಜಿಕ ಜಾಲತಾಣಗಳ ಪಾತ್ರ ಪ್ರಮುಖ

270622 Training Workshop for JDS Social Networking Section at Sindhanur
ಸಿಂಧನೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ತರಬೇತಿ ಕಾರ್ಯಾಗಾರವನ್ನು ಸಂಸದ ಪ್ರಜ್ವಲ್ ರೇವಣ್ಣ ಸೋಮವಾರ ಉದ್ಘಾಟಿಸಿದರು.
Published on

ಸಿಂಧನೂರು: ರಾಜಕೀಯದಲ್ಲಿ ಸಾಮಾಜಿಕ ಜಾಲತಾಣಗಳ ಪಾತ್ರ ಪ್ರಮುಖವಾಗಿದ್ದು, ಮುಕ್ತ ಅಭಿಪ್ರಾಯ ಹಂಚಿಕೆ ಹಾಗೂ ಜನರನ್ನು ತಲುಪುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತಂದುಕೊಟ್ಟಿವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ನಗರದ ಜೈನ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದಾರೆ. ಸಾವಿರಾರು ಕಾರ್ಯಕರ್ತರು ಪ್ರತಿ ಫಲಾಪೇಕ್ಷೆಯಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಪಕ್ಷವನ್ನು ಬುಡ ಮಟ್ಟದಿಂದ ಬೆಳೆಸುವ ಕೆಲಸವಾಗಬೇಕಿದೆ. ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ ಎಂದರು.

ಶಾಸಕ ವೆಂಕಟರಾವ ನಾಡಗೌಡ ಮಾತನಾಡಿ, ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ವಿಭಾಗದ ಸದಸ್ಯರಿಗೆ ವಿಧಾನಸಭಾ ಕ್ಷೇತ್ರವಾರು ತರಬೇತಿ ಕಾರ್ಯಾಗಾರ ಆಯೋಜಿಸಲಾಗುತ್ತಿದೆ ಎಂದು ಹೇಳಿದರು. ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಸಿದ್ಧಾಂತದ ಆಧಾರದಲ್ಲಿ ಪಕ್ಷದ ಚಟುವಟಿಕೆಗಳು ನಡೆಯುತ್ತವೆ ಎಂದರು. ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ, ಪ್ರಮುಖರಾದ ಕರಿಯಮ್ಮ, ಸಿದ್ದು ಬಂಡಿ, ಬುಡ್ಡನಗೌಡ, ರಾಮಕೃಷ್ಣ, ಬಸವರಾಜ, ಶಿವಶಂಕರ ವಕೀಲ, ಸುಮಿತ್ ತಡಕಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net