ಪಕ್ಷ ವಹಿಸಿದ ಜವಾಬ್ದಾರಿ ನಿರ್ವಹಿಸುವೆ ಎಂದ ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ

280722 Sindhanuru Kolla Sheshagiri Rao Honar
ಸಿಂಧನೂರು ಬಿಜೆಪಿ ಕಚೇರಿಯಲ್ಲಿ ಬುಧವಾರ ತುಂಗಭದ್ರಾ ಕಾಡಾ ನೂತನ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್‌ರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿದರು.
Published on

ಸಿಂಧನೂರು: ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಸ್ಥಾನಕ್ಕೆ ನ್ಯಾಯ ಒದಗಿಸುತ್ತೇನೆ ಎಂದು ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಅಭಿಮಾನಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ನಾನು ಎಂದೂ ಅಧಿಕಾರ ಬಯಸಿ ಹೋದವನಲ್ಲ. ಪಕ್ಷವು ಸೂಕ್ಷ್ಮವಾಗಿ ನನ್ನ ಕೆಲಸ ಗಮನಿಸಿ, ಕಾಡಾ ಅಧ್ಯಕ್ಷ ಸ್ಥಾನ ನೀಡಿದೆ. ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡುತ್ತದೆ ಎಂದರು.

ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮಧ್ವರಾಜ ಆಚಾರ್ಯ ಮಾತನಾಡಿ, ಬಿಜೆಪಿ ಎಲ್ಲರಿಗೂ ಕಾಲಕಾಲಕ್ಕೆ ಸೂಕ್ತ ಅಧಿಕಾರ ನೀಡುತ್ತದೆ ಎಂಬುದಕ್ಕೆ ನಾನು ಹಾಗೂ ಕೊಲ್ಲಾ ಶೇಷಗಿರಿರಾವ್ ನಿದರ್ಶನ. ಪಕ್ಷ ಈಗ ನಮಗೆ ಅಧಿಕಾರ ನೀಡಿದೆ. ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಕೆಲಸಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆಂದರು.

ಜಿಪಂ ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ, ಬಿಜೆಪಿ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದ, ನಗರ ಮಂಡಲ ಅಧ್ಯಕ್ಷ ನಿರುಪಾದೆಪ್ಪ ಜೋಳದರಾಶಿ, ಪರಮೇಶಪ್ಪ ದಢೇಸುಗೂರು, ಯಲ್ಲುಸಾ ಬದಿ, ಶಿವಬಸನಗೌಡ ಗೊರೇಬಾಳ, ನಗರ ಮಂಡಲ ಮಾಜಿ ಅಧ್ಯಕ್ಷೆ ಪ್ರೇಮಾ ಸಿದ್ಧಾಂತಿಮಠ, ಲಿಂಗರಾಜ, ಸುಬ್ಬಾರಾವ್, ತಿಮ್ಮಾರೆಡ್ಡಿ ಹುಡಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net