

ಸಿಂಧನೂರು: ಸಮಾಜಮುಖಿ ಆಲೋಚನೆಯೊಂದಿಗೆ ಜನಪರ ಕಾರ್ಯದಲ್ಲಿ ತೊಡಗಿದ್ದ ಪ್ರೊ.ಬಿ.ಕೃಷ್ಣಪ್ಪ ಅವರ ಕಾರ್ಯ ಶ್ಲಾಘನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕಸಾಪ ಹಾಗೂ ದಲಿತ ಸಾಹಿತ್ಯ ಪರಿಷತ್‌ನ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರೊ.ಬಿ.ಕೃಷ್ಣಪ್ಪ ಜನ್ಮದಿನಾಚರಣೆಯಲ್ಲಿ ಮಾತನಾಡಿದರು. ಪ್ರೊ.ಕೃಷ್ಣಪ್ಪ ಭೂ ಹಗರಣದ ನಂತರ ದಲಿತ ಸಂಘರ್ಷ ಸಮಿತಿ ಹುಟ್ಟು ಹಾಕಿದರು. ಸಂಘಟನೆ ಇಂದಿಗೂ ಬಹು ಸಮುದಾಯವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮೂಲಕ ಹೋರಾಡುತ್ತಿದೆ ಎಂದರು.