

ಸಿಂಧನೂರು: ತಾಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಅಡುಗೆ ಕೆಲಸ ಮಾಡುವ ಸಿಬ್ಬಂದಿ ವೇತನ ಪಾವತಿಗೆ ಆಗ್ರಹಿಸಿ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಎದುರು ಶುಕ್ರವಾರ ಧರಣಿ ನಡೆಸಿದರು.
ಕಳೆದ ಒಂದು ವರ್ಷದಿಂದ ವೇತನ ಪಾವತಿಯಲ್ಲಿ ವಿಳಂಬ ಮಾಡಲಾಗುತ್ತಿದೆ. ಎಜೆನ್ಸಿಯೊಂದರ ಮೂಲಕ ಕಾರ್ಮಿಕರಿಗೆ ಸಂಬಳ ನೀಡಲಾಗುತ್ತಿದೆ. ದಿನ ಬೆಳಗಾದರೆ ಮಕ್ಕಳಿಗೆ ಊಟ ಸಿದ್ಧಪಡಿಸುವ ನಾವು, ವೇತನವಿಲ್ಲದೆ ಸಂಕಷ್ಟದ ಜೀವನ ನಡೆಸುವಂತಾಗಿದೆ. ಹಲವು ಬಾರಿ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಕೂಡಲೇ ವೇತನ ಪಾವತಿಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.