ಸಿಂಧನೂರಿನಲ್ಲಿ ಜಲ ಸಂರಕ್ಷಣೆಗಾಗಿ ಮ್ಯಾರಥಾನ್

190522 Rambhāpuri khāsā śākhāmaṭhada sōmanātha śivācārya svāmīji avara 15nē varṣada guru paṭṭādhikāri
ಸಿಂಧನೂರಿನ ಕರಿಬಸವನಗರದ ರಂಭಾಪುರಿ ಖಾಸಾ ಶಾಖಾಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಅವರ 15ನೇ ವರ್ಷದ ಗುರು ಪಟ್ಟಾಧಿಕಾರಿ ವರ್ಧಂತ್ಯುತ್ಸವ ಪ್ರಯುಕ್ತ ಜಲ ಸಂರಕ್ಷಣೆಗಾಗಿ ಜನಜಾಗೃತಿ ಮೂಡಿಸಲು ಮ್ಯಾರಥಾನ್ ನಡೆಸಲಾಯಿತು.
Published on

ಸಿಂಧನೂರು: ಕರಿಬಸವನಗರದ ರಂಭಾಪುರಿ ಖಾಸಾ ಶಾಖಾಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಅವರ 15ನೇ ವರ್ಷದ ಗುರು ಪಟ್ಟಾಧಿಕಾರಿ ವರ್ಧಂತಿ ಮಹೋತ್ಸವ ಪ್ರಯುಕ್ತ ಜಲ ಸಂರಕ್ಷಣೆಗಾಗಿ ಜನಜಾಗೃತಿ ಮೂಡಿಸಲು ಗುರುವಾರ ಮ್ಯಾರಥಾನ್ ನಡೆಸಲಾಯಿತು.

ಮ್ಯಾರಾಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಶಾಸಕ ವೆಂಕಟರಾವ್ ನಾಡಗೌಡ, ನೀರಿನ ಸಂರಕ್ಷಣೆ ಮತ್ತು ಮಹತ್ವ ಕುರಿತು ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಡಾ.ಚನ್ನನಗೌಡ ಪಾಟೀಲ್ ನೇತೃತ್ವದಲ್ಲಿ ಮ್ಯಾರಥಾನ್ ಹಮ್ಮಿಕೊಂಡಿರುವುದು ಶ್ಲಾಘನೀಯ. ಅವಶ್ಯಕತೆಗೆ ತಕ್ಕಂತೆ ನೀರಿನ ಬಳಕೆ ಮಾಡಿಕೊಳ್ಳಬೇಕು. ವಿನಾಕಾರಣ ಪೋಲು ಮಾಡಬಾರದು ಎಂದರು.

ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು, ರಂಭಾಪುರಿ ಶಾಖಾ ಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಮಸ್ಕಿ ಗಚ್ಚಿನಮಠದ ವರರುದ್ರಮುನಿ ಶಿವಾಚಾರ್ಯಸ್ವಾಮೀಜಿ, ತುರ್ವಿಹಾಳ ಅಮರಗುಂಡ ಶಿವಾಚಾರ್ಯ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ, ಜೆಡಿಎಸ್ ಅಧ್ಯಕ್ಷ ಬಸವರಾಜ ನಾಡಗೌಡ, ಡಾ.ಚನ್ನನಗೌಡ ಪಾಟೀಲ್, ಅಶೋಕಗೌಡ ಗದ್ರಟಗಿ ಇದ್ದರು. ಸಿಂಧನೂರಿನ ಸ್ತ್ರೀಶಕ್ತಿ ಭವನದಿಂದ ಮೂರುಮೈಲ್ ಕ್ಯಾಂಪಿನ ಶ್ರೀಮಠದವರೆಗೆ ಮ್ಯಾರಥಾನ್ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net