ಬಿಸಿಯೂಟ ನೌಕರರ ಬೇಡಿಕೆ ಈಡೇರಿಸಿ

061222 Sindhanuru Forced to fulfill the various demands of Bisiuta employees
ಬಿಸಿಯೂಟ ನೌಕರರ ವಿವಿಧ ಬೇಡಿಕೆ ಈಡೇರಿಗೆ ಒತ್ತಾಯಿಸಿ ಸಿಂಧನೂರಿನಲ್ಲಿ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದಿಂದ ತಾಪಂ ಇಒ ಲಕ್ಷ್ಮೀದೇವಿಗೆ ಮನವಿ ಸಲ್ಲಿಸಲಾಯಿತು.
Published on

ಸಿಂಧನೂರು: ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದ ತಾಲೂಕು ಸಮಿತಿ ಸದಸ್ಯರು ತಾಪಂ ಇಒ ಲಕ್ಷ್ಮೀದೇವಿಗೆ ಮನವಿ ಸಲ್ಲಿಸಿದರು.

ಬಿಸಿಯೂಟ ನೌಕರರ ಬೇಡಿಕೆ ಈಡೇರಿಸಲು ಈಗಾಗಲೇ ಹಲವು ಬಾರಿ ಮೌಖಿಕವಾಗಿ ತಿಳಿಸಿದರೂ ಸಮಸ್ಯೆ ಪರಿಹಾರವಾಗಿಲ್ಲ. ನಿಯಮದ ಪ್ರಕಾರ ಸಮಯಕ್ಕೆ ಸರಿಯಾಗಿ ವೇತನ ನೀಡುತ್ತಿಲ್ಲ. ಆಹಾರ-ಧಾನ್ಯ ವಿತರಿಸುತ್ತಿಲ್ಲ. ಇದರಿಂದ ಕನಿಷ್ಠ ಗೌರವಧನ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ನೌಕರರು ಜೀವನ ನಡೆಸುವುದು ಕಷ್ಟವಾಗಿದೆ.

ಕೂಡಲೇ ಸರ್ಕಾರದ ನಿರ್ದೇಶನದಂತೆ ಜಂಟಿ ಸಭೆ ಕರೆಯಬೇಕು. ಬಾಕಿ ಇರುವ ಗೌರವಧನ ಹಾಗೂ ಸಾದಿಲ್ವಾರ್ ಹಣ ಬಿಡುಗಡೆ ಮಾಬೇಕು. ಗುಣಮಟ್ಟದ ಆಹಾರ ಧಾನ್ಯ ನೀಡಬೇಕು. ಮಕ್ಕಳ ಹಾಜರಾತಿ ಕಡಿಮೆ ಇದ್ದಲ್ಲಿ ಬಿಸಿಯೂಟ ನೌಕರರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಬೇಕು. ಈಗಾಗಲೇ ಇಲಾಖೆಗೆ ನೀಡಿದ ಬ್ಯಾಂಕ್ ಖಾತೆಗೆ ಗೌರವಧನ ಜಮೆ ಮಾಡಬೇಕು. ಪ್ರತಿ ತಿಂಗಳು 7ನೇ ತಾರೀಕಿನಂದು ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷೆ ರೇಣುಕಮ್ಮ, ತಾಲೂಕು ಅಧ್ಯಕ್ಷ ವಿಶಾಲಾಕ್ಷಿ, ಕಾರ್ಯದರ್ಶಿ ಶರಣಮ್ಮ ಪಾಟೀಲ್, ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ ಹಾಗೂ ಬಿಸಿಯೂಟ ನೌಕರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net