ಬಸ್ ಸೌಕರ್ಯ ಒದಗಿಸಲು ಆಗ್ರಹ

130223 Sindhanuru Students Protest
ಬಸ್ ಸೌಲಭ್ಯ ಒದಗಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಸಿಂಧನೂರು ಬಸ್ ಡಿಪೋ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.
Published on

ಸಿಂಧನೂರು: ಬಸಾಪುರ, ಜಾಲಿಹಾಳ ಗ್ರಾಮಗಳಿಗೆ ಸಮರ್ಪಕ ಬಸ್ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ನಗರದ ಬಸ್ ಡಿಪೋ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ಕಳೆದ ಹಲವು ತಿಂಗಳಿಂದ ಗ್ರಾಮಗಳಿಗೆ ಸಮರ್ಪಕ ಬಸ್ ಸೌಲಭ್ಯವಿಲ್ಲ. ಇದರಿಂದ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬೇರೆ ನಗರಕ್ಕೆ ತೆರಳಲು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ ಸಾರಿಗೆ ಸಂಸ್ಥೆಗೆ ಸಮಸ್ಯೆಯನ್ನು ಗಮನಕ್ಕೆ ತರಲಾಗಿದ್ದು, ಇಲ್ಲಿವರೆಗೂ ಪರಿಹಾರವಾಗಿಲ್ಲ. ಬೆಳಗ್ಗೆ ಮತ್ತು ಮಧ್ಯಾಹ್ನ ಸಮಯದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ವಿದ್ಯಾರ್ಥಿಗಳಾದ ಬೀರಪ್ಪ, ರಾಜೇಶ, ತಿಪ್ಪಣ್ಣ , ಜ್ಯೋತಿ ನೇತ್ರಾವತಿ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net