

ಸಿಂಧನೂರು: ಡಾ.ಬಿ.ಆರ್.ಅಂಬೇಡ್ಕರ್‌ರಿಂದ ರಚನೆಗೊಂಡ ಸಂವಿಧಾನವನ್ನು ಗೌರವಿಸುವುದು ಎಲ್ಲರ ಮೂಲ ಕರ್ತವ್ಯವಾಗಿದೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಅಧ್ಯಕ್ಷ ವೈ.ನರೇಂದ್ರನಾಥ ಹೇಳಿದರು.
ನಗರದ ವಿದ್ಯಾ ಪಬ್ಲಿಕ್ ಸ್ಕೂಲ್‌ನಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ 132ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿ ಬಾಳಬೇಕು. ಸಂವಿಧಾನದ ಸೂತ್ರವನ್ನು ಪಾಲಿಸಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಮೌಲಪ್ಪ ಮಾಡಸಿರವಾರ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಂಪಯ್ಯ ಸ್ವಾಮಿ ಸಾಲಿಮಠ ವಹಿಸಿದ್ದರು. ಉಪನ್ಯಾಸಕ ರಾಮಣ್ಣ ಹಿರೇಬೇರ್ಗಿ, ಗುಂಡೂರಾವ್ ಚನ್ನಳ್ಳಿ, ಸಂಗೀತ ಸಾರಂಗಮಠ ಇದ್ದರು.