ದೇಶಕ್ಕೆ ಕಲಾಂ ಕೊಡುಗೆ ಅಪಾರ; ಜಿಪಂ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ ಹೇಳಿಕೆ

29072022 sindhanoor news
Published on

ಸಿಂಧನೂರು: ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಭಾರತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ ಹೇಳಿದರು.

ನಗರದ ಪಿಡಬ್ಲ್ಯುಡಿ ಕ್ಯಾಂಪಿನ ವಾರ್ಡ್ ನಂ.31ರಲ್ಲಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಪುಣ್ಯಸ್ಮರಣೆ ಅಂಗವಾಗಿ ಬುಧವಾರ ಕಲಾಂ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ, ಸಸಿಗಳ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣ, ವಿಜ್ಞಾನ, ಬಾಹ್ಯಾಕಾಶ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆಯನ್ನು ಕಲಾಂ ನೀಡಿದ್ದಾರೆ. ಆದ್ದರಿಂದ ಅವರು ಕ್ಷಿಪಣಿ ಪಿತಾಮಹ ಎಂದು ಪ್ರಸಿದ್ಧಿ ಪಡೆದಿದ್ದರು. ಅಲ್ಲದೆ ಎಲ್ಲ ಮಕ್ಕಳಿಗೂ ಮುದ್ದಿನ ಮೇಷ್ಟ್ರು ಆಗಿದ್ದರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net