ಪೊಲೀಸರ ಮೇಲೆ ಹಲ್ಲೆ ನಡೆಸಿದವನ್ನು ಬಂಧಿಸಿ

Sindhanuru BJP Appeal
ಸಿಂಧನೂರಿನಲ್ಲಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಬಿಜೆಪಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.
Published on

ಸಿಂಧನೂರು: ನಗರದಲ್ಲಿ ಪುನೀತ್ ರಾಜಕುಮಾರ್ ಪುತ್ಥಳಿ ಮೆರವಣಿಗೆ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಬಿಜೆಪಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.

ಶಾಸಕ ವೆಂಕಟರಾವ ನಾಡಗೌಡ ಪುತ್ರ ಅಭಿಷೇಕ್ ನಾಡಗೌಡ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪುನೀತ್ ರಾಜಕುಮಾರ್ ಪುತ್ಥಳಿ ಮೆರವಣಿಗೆಯಲ್ಲಿ ಪೊಲೀಸ್ ಅಧಿಕಾರಿ ಮೇಲೆ ದೌರ್ಜನ್ಯ ಎಸಗಿ ನಗರದಲ್ಲಿ ಶಾಂತಿ ಕದಡಲು ಕಾರಣರಾದವರನ್ನು ಶೀಘ್ರ ಬಂಧಿಸಬೇಕೆಂದು ಒತ್ತಾಯಿಸಲಾಯಿತು. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ವೆಂಕೋಬ ಸಾಸಲಮರಿ, ಕೆ.ಮರಿಯಪ್ಪ, ನಾಗೋಜಿ ಮರಾಠಿ, ಪರಮೇಶ್ವರಪ್ಪ ದಢೇಸುಗೂರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net