ಸಿಬ್ಬಂದಿಗೂ ಮೊಬೈಲ್ ಬಳಕೆ ನಿಷೇಧ

mobile
Published on

ಸಿಂಧನೂರು: ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಗೆ ಸಂಬಂಧಿಸಿದಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಸೂಚನೆಯಂತೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಶಿವರಾಜ ಹೇಳಿದರು.

ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸ್ಥಳೀಯ ಕೇಂದ್ರದಲ್ಲಿ 715 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೇಲ್ವಿಚಾರಕರು ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ ಕಂಡುಬಂದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ತಿಳಿಸಬೇಕು. ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ನೀಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಸಿಬ್ಬಂದಿಗೂ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net