ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಿ

16SND-03
Published on

ಸಿಂಧನೂರು: ಹೊಲಿಗೆ ಯಂತ್ರ ತರಬೇತಿ ಪಡೆದ ಮಹಿಳೆಯರು ಸ್ವ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಾಗವೇಣಿ ಪಾಟೀಲ್ ತಿಳಿಸಿದರು.

ನಗರದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಈಚೆಗೆ ಹಮ್ಮಿಕೊಂಡಿದ್ದ ಮಹಿಳೆಯರ ಹೊಲಿಗೆ ತರಬೇತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಜ್ಞಾನ ವಿಕಾಸ ಯೋಜನೆ 3 ತಿಂಗಳ ತರಬೇತಿ ಪಡೆದು ದುಡಿಯಲು ಅಣಿಯಾಗಿದ್ದಿರಿ, ಧರ್ಮಸ್ಥಳ ಸಂಸ್ಥೆಯ ನೆರವು ಪಡೆದು ಸ್ವ ಉದ್ಯೋಗ ಆರಂಭಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ ಎಂದರು. ಯೋಜನಾಧಿಕಾರಿ ಶೇಖರ, ಜ್ಞಾನ ವಿಕಾಸದ ಸಂಚಾಲಕಿ ಶ್ರೀದೇವಿ, ಎಸ್. ವಾಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net