ಹೋರಾಟಕ್ಕೆ ಮಣಿದು ಕೇಂದ್ರಕ್ಕೆ ಶಿಫಾರಸು

27SND-04
ಒಳಮೀಸಲಾತಿ ಕಲ್ಪಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಸಿಂಧನೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಪ್ರಮುಖರು ಶನಿವಾರ ಮಾಲಾರ್ಪಣೆ ಮಾಡಿದರು. ಸಮಿತಿ ಪ್ರಧಾನ ಸಂಚಾಲಕ ಎಚ್.ಸೂಲಂಗಿ, ಪ್ರಮುಖರಾದ ಅಮರೇಶ ಗಿರಿಜಾಲಿ, ಅಶೋಕ ಗೊರೇಬಾಳ ಇದ್ದರು.
Published on

ಸಿಂಧನೂರು:ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಶನಿವಾರ ನಗರದ ಗಾಂಧಿವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ 25 ವರ್ಷಗಳಿಂದ ಹೋರಾಟ ನಡೆಸಲಾಗಿದೆ. ಸರ್ಕಾರ ಹೋರಾಟಕ್ಕೆ ಮಣಿದು ಒಳ ಮೀಸಲಾತಿಗಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ ಎಂದು ಪ್ರಮುಖರು ಹರ್ಷ ವ್ಯಕ್ತಪಡಿಸಿದರು. ಪ್ರಮುಖರಾದ ನಾಗರಾಜ ಸಾಸಲಮರಿ, ಬಸವರಾಜ್ ತಿಡಿಗೋಳ, ಶಶಿಧರ, ಹನುಮೇಶ ಜಾಲಿಹಾಳ, ಹನುಮೇಶ ಮೈತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net