ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ

Basanagouda Badarli KPCC General Secretary
ಬಸನಗೌಡ ಬಾದರ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ.
Published on

ಸಿಂಧನೂರು: ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಕುಟುಂಬಕ್ಕೆ ಮಾಹಿತಿ ಇಲ್ಲದೆ ನನ್ನ ತಾಯಿ ಹಾಗೂ ಸಹೋದರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. 11 ಸಾವಿರಕ್ಕೂ ಅಧಿಕ ಮತದಾರರ ಹೆಸರನ್ನು ಡಿಲಿಟ್ ಮಾಡಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಲೋಪವಾಗಿರುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ಎಲ್ಲ ಬೂತ್‌ಗಳಿಗೆ ಏಜೆಂಟರನ್ನು ನೇಮಿಸಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಸರ್ಕಾರ ಮತದಾರರ ಹಕ್ಕು ಕಸಿಯುವ ಹುನ್ನಾರ ನಡೆಸಿದೆ. ಅಕ್ರಮವನ್ನು ಕಾಂಗ್ರೆಸ್ ಬಯಲಿಗೆ ಎಳೆದಿದೆ ಎಂದರು.

ಪಕ್ಷದ ಪ್ರಮುಖರಾದ ಶಿವಕುಮಾರ ಜವಳಿ, ವೆಂಕನಗೌಡ, ವೆಂಕಟೇಶ ರಾಗಲಪರ್ವಿ, ಅಮರೇಶ ಗಿರಿಜಾಲಿ, ಮುದುಕಪ್ಪ ವೆಂಕಟೇಶ್ವರಕ್ಯಾಂಪ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net