ಪ್ರಜಾಪ್ರಭುತ್ವ ಕೊನೆಗಾಣಿಸಲು ಹುನ್ನಾರ

Sindhanuru Congress Protest
Published on

ಸಿಂಧನೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿದ್ದನ್ನು ವಿರೋಧಿಸಿ ಶುಕ್ರವಾರ ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್‌ಗಾಂಧಿ ಹಾಗೂ ಕಾಂಗ್ರೆಸ್ ಬಗ್ಗೆ ಭಯವಿದೆ. ಪ್ರಜಾಪ್ರಭುತ್ವ ಕೊನೆಗಾಣಿಸಲು ರಾಹುಲ್ ಗಾಂಧಿ ಅವರ ಸದಸ್ಯತ್ವ ರದ್ದುಗೊಳಿಸಲಾಗಿದೆ. ಸತ್ಯ ಹೇಳುವವರ ಬಾಯಿ ಮುಚ್ಚಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ದೇಶದ ಜನ ಸರ್ವಾಧಿಕಾರವನ್ನು ಸಹಿಸುವುದಿಲ್ಲ. ಪ್ರಜಾಪ್ರಭುತ್ವ ಉಳಿಸಲು ನಾವೆಲ್ಲ ರಾಹುಲ್ ಗಾಂಧಿ ಜತೆಗಿದ್ದೇವೆಂದು ಪ್ರತಿಭಟನೆಕಾರರು ತಿಳಿಸಿದರು. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ ಜವಳಿ, ವೆಂಕಟೇಶ ರಾಗಲಪರ್ವಿ, ಶರಣಯ್ಯಸ್ವಾಮಿ ಕೋಟೆ, ಖಾಜಾಹುಸೇನ್ ರೌಡಕುಂದ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net