ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

25092020 Sindhanur Protest
Published on

ಸಿಂಧನೂರು: ರೈತ, ದಲಿತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ರೈತ ಸಂಘಟನೆಗಳ ಸಮನ್ವಯ ಸಮಿತಿ ತಾಲೂಕು ಘಟಕ ನೇತೃತ್ವದಲ್ಲಿ ಶುಕ್ರವಾರ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ ಪ್ರತಿಭಟಿಸಲಾಯಿತು.

ಕಾಯ್ದೆ ವಿರೋಧಿಸಿ ರಾಷ್ಟ್ರಮಟ್ಟದ ಹೋರಾಟಕ್ಕೆ ಸಿಂಧನೂರಿನ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ ಎಂದು ಒಕ್ಕೂಟದ ಮುಖಂಡರು ತಿಳಿಸಿದರು. ತಾಲೂಕು ಒಕ್ಕೂಟದ ಪ್ರಧಾನ ಸಂಚಾಲಕ ಡಿ.ಎಚ್.ಕಂಬಳಿ, ಸಂಚಾಲಕರಾದ ಚಂದ್ರಶೇಖರ ಗೊರಬಾಳ, ಎಸ್.ದೇವೇಂದ್ರಗೌಡ, ಬಸವರಾಜ ಬಾದರ್ಲಿ, ಶಂಕರ ಗುರಿಕಾರ, ಬಿ.ಎನ್.ಯರದಿಹಾಳ, ವೀರಭದ್ರಗೌಡ ಅಮರಾಪುರ, ಗುಂಡಪ್ಪ ಬಳಿಗಾರ, ನಾರಾಯಣ ಬೆಳಗುರ್ಕಿ, ಸಮ್ಮದ್ ಚೌದ್ರಿ, ಚಾಂದಪಾಷ ಜಾಗೀರದಾರ್, ಸುರೇಶ ಕಟ್ಟಿಮನಿ, ವೀರೇಶ ಬಾವಿಮನಿ, ಗಂಗಣ್ಣ ಡಿಸ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net