ಈಶ್ವರಪ್ಪ ಬಂಧಿಸಿ ತನಿಖೆಗೊಳಪಡಿಸಿ

190422 Sindhanuru CPI (M), CPI, CPI (ML), SUCI Appeal
ಸಿಂಧನೂರಿನಲ್ಲಿ ತಹಸಿಲ್ ಕಚೇರಿ ಶಿರಸ್ತೇದಾರ್ ಚಂದ್ರಶೇಖರಗೆ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್), ಎಸ್‌ಯುಸಿಐ ಪ್ರಮುಖರು ಮಂಗಳವಾರ ಮನವಿ ಸಲ್ಲಿಸಿದರು.
Published on

ಸಿಂಧನೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐಎಂ, ಸಿಪಿಐ, ಸಿಪಿಐಎಂಎಲ್ ಲಿಬರೇಶನ್, ಎಸ್‌ಯುಸಿಐ ಸದಸ್ಯರು ಮಂಗಳವಾರ ತಾಲೂಕು ಆಡಳಿತ ಸೌಧ ಕಚೇರಿ ಎದುರು ಜಂಟಿಯಾಗಿ ಪ್ರತಿಭಟನೆ ನಡೆಸಿ, ತಹಸಿಲ್ ಕಚೇರಿ ಶಿರಸ್ತೇದಾರ ಚಂದ್ರಶೇಖರಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ 4 ಕೋಟಿ ರೂ. ವೆಚ್ಚದ ಕಾಮಗಾರಿಗೆ ಬಿಲ್ ಪಾಸ್ ಮಾಡಲು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶೇ.40 ಕಮಿಷನ್ ಕೇಳಿದ ಕಾರಣ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆದರೆ ಪೊಲೀಸರು ಈಶ್ವರಪ್ಪರನ್ನು ಇದುವರೆಗೂ ಬಂಧಿಸಿಲ್ಲ. ಇದು ಸರ್ಕಾರದ ಮೇಲಿನ ಸಂಶಯಕ್ಕೆ ಕಾರಣವಾಗಿದೆ. ಇದರ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಪರಿವಾರದ ಕೈವಾಡವಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಶ್ವರಪ್ಪ ಅವರ ರಕ್ಷಣೆಗೆ ನಿಂತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಸಿಪಿಐ ತಾಲೂಕು ಸಮಿತಿ ಕಾರ್ಯದರ್ಶಿ ಶೇಕ್ಷಾ ಖಾದ್ರಿ, ಪ್ರಮುಖರಾದ ಬಾಷುಮಿಯಾ, ಎಸ್.ದೇವೇಂದ್ರಗೌಡ, ಯಂಕಪ್ಪ ಕೆಂಗಲ್, ಬಸವರಾಜ ಏಕ್ಕಿ, ಅನ್ವರ್ ಪಾಷಾ, ರಾಮಣ್ಣ, ಅಪ್ಪಣ್ಣ ಕಾಂಬಳೆ, ಚಾಂದ್ ಪಾಷಾ, ಚಂದಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net