ಬೆಲೆ ಏರಿಕೆ ನಿಯಂತ್ರಿಸಿ ತೊಂದರೆ ತಪ್ಪಿಸಲು ಮಹಿಳಾ ಕಾಂಗ್ರೆಸ್ ಆಗ್ರಹ

Sindhanuru Women Congress Protest
ತೈಲ ಬೆಲೆಗಳ ಏರಿಕೆಯನ್ನು ಖಂಡಿಸಿ ಸಿಂಧನೂರಿನಲ್ಲಿ ಮಹಿಳಾ ಕಾಂಗ್ರೆಸ್ ಗುರುವಾರ ಪ್ರತಿಭಟನೆ ನಡೆಸಿತು.
Published on

ಸಿಂಧನೂರು: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಗುರುವಾರ ಪ್ರತಿಭಟನೆ ನಡೆಸಿತು.

ಪಟ್ಟಣದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ್ದ ಆಕ್ರೋಶ ವ್ಯಕ್ತಪಡಿಸಿದರು. ಲಾಕ್‌ಡೌನ್‌ನಿಂದಾಗಿ ಎಲ್ಲರ ಜನಜೀವನ ಸಂಕಷ್ಟದಲ್ಲಿದೆ. ಇಂತಹ ಸಮಯದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಇತರ ಎಲ್ಲಾ ವಸ್ತುಗಳ ದರಗಳೂ ಏರಿಕೆಯಾಗುತ್ತವೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು. ಬೆಲೆ ಏರಿಕೆಯನ್ನು ತಡೆದು, ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net