

ಬೆಳ್ತಂಗಡಿ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಬೆಳ್ತಂಗಡಿ ರೋಟರಿ ಕ್ಲಬ್ ಆಶ್ರಯದಲ್ಲಿ ಬೆಂಗಳೂರು ಇಂದಿರಾ ನಗರ ರೋಟರಿ, ಕ್ಯಾನ್ ಫಿನ್ ಹೋಮ್ಸ್ ಮತ್ತಿತರ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಮುಂಡಾಜೆ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕಟ್ಟಡ ಸಿಂಧೂರ ಜೂನ್ 20ರಂದು ಬೆಳಗ್ಗೆ 10ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ತಿಳಿಸಿದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಉದ್ಘಾಟನೆ ನೆರವೇರಿಸುವರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಎಂಎಲ್‌ಸಿ ಕೆ.ಪ್ರತಾಪಸಿಂಹ ನಾಯಕ್, ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಗಣೇಶ ಬಂಗೇರ, ಕ್ಯಾನ್ ಫಿನ್ ಹೋಮ್ಸ್‌ನ ಡಿಜಿಎಂ ಪ್ರಶಾಂತ್ ಜೋಷಿ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್‌ನ ಕೆ.ಮೋಹನ್ ಕುಮಾರ್, ಶತಾಬ್ದಿ ವಿದ್ಯಾಲಯ ಸಮಿತಿ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಬಿಇಒ ವೆಂಕಟೇಶ ತುಳುಪುಳೆ, ನಿಕಟಪೂರ್ವ ಜಿಲ್ಲಾ ಗವರ್ನರ್ ಎಚ್.ಆರ್.ಕೇಶವ, ಸುಪ್ರಿಯಾ ಕಂದಾರಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ನಿಕಟಪೂರ್ವ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಕಾರ್ಯದರ್ಶಿ ಸಂದೇಶ್ ರಾವ್, ಮಾಜಿ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯ ಚಂದ್ರ, ಕಾರ್ಯದರ್ಶಿ ನಾರಾಯಣಗೌಡ, ಕನ್ನಡ ಮಾಧ್ಯಮ ಶಾಲಾ ಸಂಚಾಲಕ ನಾರಾಯಣ ಫಡಕೆ, ಮುಖ್ಯಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು.