ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ..

Shivamogga Subbanna
Published on

ಬೆಂಗಳೂರು: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಇಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಇಂದು ಅವರು ನಿಧನರಾದರು.

ಸುಗಮ ಸಂಗೀತ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರಾಗಿರುವ ಅವರು ಮೂಲ ಹೆಸರು ಜಿ. ಸುಬ್ರಹ್ಮಣ್ಯಂ. ನಂತರ ಅವರು ಶಿವಮೊಗ್ಗ ಸುಬ್ಬಣ್ಣ ಎಂದೇ ಹೆಸರುವಾಸಿಯಾದರು. ಶಿವಮೊಗ್ಗ ಜಿಲ್ಲೆಯ ನಗರದವರಾದ ಇವರು ಗಣೇಶ್ ರಾವ್-ರಂಗನಾಯಕಮ್ಮ ದಂಪತಿಯ ಪುತ್ರ.

ಆರಂಭದಲ್ಲಿ ಆಕಾಶವಾಣಿಯ ಗಾಯಕರಾಗಿದ್ದ ಅವರು ಬಳಿಕ ಚಂದ್ರಶೇಖರ ಕಂಬಾರ ನಿರ್ದೇಶನದ ‘ಕರಿಮಾಯಿ’ ಚಿತ್ರದ ಮೂಲಕ ಹಿನ್ನೆಲೆ ಗಾಯಕರಾಗಿ ಸಿನಿಮಾ ರಂಗಕ್ಕೂ ಪ್ರವೇಶಿಸಿದ್ದರು. ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ...’ ‘ಬಿದ್ದೀಯಬ್ಬೇ ಮುದುಕಿ..’ ಹಾಡುಗಳು ಇವರ ಗಾಯನದ ಗೀತೆಗಳಲ್ಲಿ ಅತ್ಯಂತ ಜನಪ್ರಿಯವಾದಂಥವು.

Koo App
"ಕಾಡು ಕುದುರೆ ಓಡಿ ಬಂದಿತ್ತಾ" ಎಂಬ ಹಾಡಿನ ಮೂಲಕ ಜನ ಮಾನಸದಲ್ಲಿ ಉಳಿದಂತ ಸುಗಮ ಸಂಗೀತ ಗಾಯಕ, ಹಿನ್ನಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಶ್ರೀ ಶಿವಮೊಗ್ಗ ಸುಬ್ಬಣ್ಣನವರ ಸಾವು ತೀವ್ರ ನೋವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಕುಟುಂಬಸ್ಥರಿಗೆ ಮತ್ತು ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥನೆ. ಓಂ ಶಾಂತಿ
View attached media content
-Pralhad Joshi (@joshipralhad)12 Aug 2022
Koo App
ಖ್ಯಾತ ಗಾಯಕ ಹಾಗೂ ವಕೀಲರಾಗಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರು ಹೃದಯಾಘಾತದಿಂದ ವಿಧಿವಶರಾಗಿರುವ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಯಿತು. ತಮ್ಮ ಅದ್ಭುತ ಕಂಠದ ಮೂಲಕ ಅವರು ಹೆಸರುವಾಸಿಯಾಗಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. @BJP4Karnataka
View attached media content
-Dr. Murugesh R Nirani (@murugesh_nirani)12 Aug 2022
Koo App
ಖ್ಯಾತ ಗಾಯಕ ಹಾಗೂ ವಕೀಲರಾಗಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರು ಹೃದಯಾಘಾತದಿಂದ ವಿಧಿವಶರಾಗಿರುವ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಯಿತು. ತಮ್ಮ ಅದ್ಭುತ ಕಂಠದ ಮೂಲಕ ಅವರು ಹೆಸರುವಾಸಿಯಾಗಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. @BJP4Karnataka
View attached media content
-Dr. Murugesh R Nirani (@murugesh_nirani)12 Aug 2022
Koo App
ಕನ್ನಡದ ಜನಪ್ರಿಯ ಸುಗಮ ಸಂಗೀತ ಗಾಯಕ, ಅಮೋಘ ಕಂಠಸಿರಿಯ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ‌ ನಿಧನ ತೀವ್ರ ದುಃಖದ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಕುಟುಂಬದವರು ಹಾಗೂ ಅಪಾರ ಅಭಿಮಾನಿಗಳಿಗೆ ಈ ನೋವು ಸಹಿಸುವ ಶಕ್ತಿಯನ್ನು ದೇವರು ನೀಡಲಿ. ಓಂ ಶಾಂತಿ. 1979 ರಲ್ಲಿ ‘ಕಾಡುಕುದುರೆ’ ಚಿತ್ರದ ‘ಕಾಡು ಕುದುರೆ ಓಡಿ ಬಂದಿತ್ತಾ’ ಹಾಡಿಗೆ ಅವರಿಗೆ ರಜತ ಕಮಲ ರಾಷ್ಟ್ರಪ್ರಶಸ್ತಿ ದೊರಕಿತ್ತು. ಈ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗರೆಂಬ ಖ್ಯಾತಿಯನ್ನು ಅವರು ಗಳಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪುರಸ್ಕಾರ ಸೇರಿದಂತೆ ಹಲವಾರು ಗೌರವ ಅವರಿಗೆ ದೊರೆತಿದೆ. #ShimoggaSubba
View attached media content
-Araga Jnanendra (@aragajnanendra)12 Aug 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net