ಸೆ.15ರಂದು ಸರ್ ಎಂವಿ ಜಯಂತಿ

9BDVT1
Published on

ಭದ್ರಾವತಿ: ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಿಂದ ಭಾರತ ರತ್ನ ಸರ್ ಎಂ.ವಿಶ್ವೇಶ್ವರಾಯ ಅವರ 163ನೇ ಜಯಂತಿ ಹಾಗೂ ಸರ್ವ ಸದಸ್ಯರ ಸಭೆಯನ್ನು ಸೆ.15ರ ಬೆಳಗ್ಗೆ 10 ಗಂಟೆಗೆ ಜನ್ನಾಪುರದ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.

ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ.ರಾಮಲಿಂಗಯ್ಯ ಅಧ್ಯಕ್ಷತೆ ವಹಿಸುವರು. ನಿಧನರಾದ ಸದಸ್ಯರಿಗೆ ಸಂತಾಪ, ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡನೆ ಸೇರಿದಂತೆ ಇತರ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಧಾನ ಕಾರ್ಯದರ್ಶಿ ಬಿ.ಮಂಜುನಾಥ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net