ಮತದಾರರಿಗೆ ದ್ವಿಪ್ರತಿಯಲ್ಲಿ ಎನ್ಯುಮರೇಷನ್ ಫಾರ್ಮ್ ನೀಡಲಾಗಿದ್ದು, ಅಗತ್ಯ ಮಾಹಿತಿಯನ್ನು ಈ ನಮೂನೆಯಲ್ಲಿ ಭರ್ತಿ ಮಾಡಿ, 1 ಪ್ರತಿಯನ್ನು ಮತದಾರರು ತಮ್ಮ ಬಳಿ ಇಟ್ಟುಕೊಂಡು ಮತ್ತೊಂದು ಪ್ರತಿಯನ್ನು ಬಿ.ಎಲ್.ಒ.ಗಳಿಗೆ ಹಸ್ತಾಂತರಿಸಬೇಕು. ಅರ್ಜಿ ನಮೂನೆ ಭರ್ತಿ ಮಾಡಲು ಹಾಗೂ 2002ರ ಮತದಾರರ ಪಟ್ಟಿಯ ವಿವರ ಭರ್ತಿ ಮಾಡಲು ಮತದಾರರಿಗೆ ಸಹಕರಿಸಲು ಪ್ರತಿ ಮತಗಟ್ಟೆಯಲ್ಲಿ ಮತದಾರರ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 18,05,189 ಮತದಾರರು ಇದ್ದಾರೆ.