ಶಿರಾ ಉಪಚುನಾವಣೆ- ರಾಜಣ್ಣ ಆಸೆಗೆ ತಣ್ಣೀರೆರಚಿದ ಡಿಕೆಶಿ

Rajanna and DKShi
Published on

ಬೆಂಗಳೂರು: ಮುಂಬರುವ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ಸಿಗೆ ಎದುರಾಗಿರುವ ಆಂತರಿಕ ಗೊಂದಲ ನಿವಾರಣೆಗೆ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಕೈಹಾಕಿದ್ದಾರೆ.

ಶಿರಾವನ್ನು ಈವರೆಗೂ ಪ್ರತಿನಿಧಿಸುತ್ತಿದ್ದ ಮಾಜಿ ಸಚಿವ ಟಿಬಿ ಜಯಚಂದ್ರ ಅವರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಹುತೇಕ ಟಿಕೆಟ್ ಅಂತಿಮಗೊಂಡಿದೆ. ಆದರೆ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ರಾಜಣ್ಣ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದರಿಂದ ಚುನಾವಣೆ ವರೆಗೆ ಗೊಂದ ಮುಂದುವರಿದರೆ ಕ್ಷೇತ್ರ ಕಳೆದುಕೊಳ್ಳಬೇಕಾಗಬಹುದು ಎಂದರಿತ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾನುವಾರ ದೂರವಾಣಿ ಮೂಲಕ ಚರ್ಚಿಸಿ, ಗೊಂದಲಕ್ಕೆ ತೆರೆ ಎಳೆಯಲು ನಿರ್ಧರಿಸಿದ್ದರು.

ಹೀಗಾಗಿ ಸೋಮವಾರ ರಾಜಣ್ಣ ಅವರನ್ನು ಬೆಂಗಳೂರಿಗೆ ಕರೆಸಿಕೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಉಪಚುನಾವಣೆ ಸಂಬಂಧ ಚರ್ಚೆ ನಡೆಸಿದರು. ಜತೆಗೆ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುವಂತೆ ರಾಜಣ್ಣ ಅವರನ್ನು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net