7ನೇ ವೇತನ ಜಾರಿಗೆ ಹೋರಾಟ ಅಗತ್ಯ

21 siraguppa 02
Published on

ಸಿರಗುಪ್ಪ: ಇತ್ತೀಚೆಗೆ ಮಂಡಿಸಿದ ಬಜೆಟ್‌ನಲ್ಲಿ ಸರ್ಕಾರಿ ನೌಕರರ ಬಗ್ಗೆ ಯಾವುದೇ ಯೋಜನೆ ಪ್ರಕಟಿಸಿಲ್ಲ. ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಿದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲಿಂಗರಾಜ ಹೇಳಿದರು.

ನಗರದ ಸಿಡಿಪಿಒ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸರ್ಕಾರಿ ನೌಕರರ ಸಭೆಯಲ್ಲಿ ಮಾತನಾಡಿ, ನೌಕರರ ಸಮಸ್ಯೆ ಬಗೆಹರಿಸುವಂತೆ ಸಂಘದ ರಾಜ್ಯಾಧ್ಯಕ್ಷರು ಮುಖ್ಯಮಂತ್ರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಜಾರಿ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದು, ಇದುವರೆಗೂ ಈಡೇರಿಲ್ಲ. ಈ ಬಗ್ಗೆ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಚರ್ಚಿಸಲು ರಾಜ್ಯಾಧ್ಯಕ್ಷರು ಸಭೆ ಕರೆದಿದ್ದು, ತಾಲೂಕಿನ ಸರ್ಕಾರಿ ನೌಕರರ ಪದಾಧಿಕಾರಿಗಳು ಭಾಗವಹಿಸಬೇಕು ಎಂದರು.

ಸಂಘಟನೆಗಳ ಪದಾಧಿಕಾರಿಗಳಾದ ಹುಚ್ಚಿರಪ್ಪ, ಹನುಮಂತಪ್ಪ, ರಮೇಶ, ಚನ್ನಪ್ಪ, ಶ್ರೀಧರ, ಸುರೇಶ, ಶಾಂತಾ, ರಾಜೇಶ್ವರಿ, ಪ್ರಹ್ಲಾದ, ಜಗದೀಶ, ಏಸನ್ನ, ಜಿ.ವೆಂಕಟೇಶ, ರಾಘವೇಂದ್ರ ಶೆಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net