ನಿಯಂತ್ರಣ ತಪ್ಪಿದ ಕಾರು, ಮರದ ಕೆಳಗೆ ತರಕಾರಿ ಮಾರುತ್ತಿದ್ದ ಮಹಿಳೆಗೆ ಡಿಕ್ಕಿ-ಸಾವು

11072021 Siraguppa Car Accident
Published on

ಸಿರಗುಪ್ಪ: ತಾಲೂಕಿನ ನಂ.64 ಹಳೇಕೋಟೆ ಗ್ರಾಮ ಬಳಿ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿ ತರಕಾರಿ ಮಾರುತ್ತಿದ್ದ ಮಹಿಳೆ ಭಾನುವಾರ ಮೃತಪಟ್ಟಿದ್ದು, ಆರು ಜನ ಗಾಯಗೊಂಡಿದ್ದಾರೆ.

ಹೆದ್ದಾರಿ ಬಳಿಯ ಸ್ವಂತ ಜಮೀನಿನಲ್ಲಿ ಬೆಳೆದ ತರಕಾರಿಯನ್ನು ರಸ್ತೆ ಪಕ್ಕದಲ್ಲಿ ಮಾರಾಟ ಮಾಡುತ್ತಿದ್ದ ಹಳೇಕೋಟೆ ಗ್ರಾಮದ ಶಾಂತಮ್ಮ (45) ಮೃತೆ. ಕಾರು ಸಿರಗುಪ್ಪದಿಂದ ಸಿರಿಗೇರಿ ಕ್ರಾಸ್‌ಗೆ ತೆರಳುತ್ತಿದ್ದ ವೇಳೆ ಚಾಲಕ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಇದರಿಂದ ಚಾಲಕ, ಕಾರಲ್ಲಿದ್ದ ಇನ್ನಿಬರು ಹಾಗೂ ತರಕಾರಿ ಖರೀದಿಸಲು ಬಂದಿದ್ದ ಮೂವರು ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತೆಕ್ಕಲಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸ್‌ಐ ಶಿವಕುಮಾರ್ ನಾಯಕ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net