ಬಿಜೆಪಿ ಎಸ್ಟಿ ಮೋರ್ಚಾ ಸಮಾವೇಶಕ್ಕೆ 10 ಲಕ್ಷ ಜನ

MS Somalingappa
SL
Published on

ಸಿರಗುಪ್ಪ: ಬಳ್ಳಾರಿಯಲ್ಲಿ ನ.20ರಂದು ನಡೆಯಲಿರುವ ಬಿಜೆಪಿ ಎಸ್ಟಿ ಮೊರ್ಚಾದ ರಾಜ್ಯ ಸಮಾವೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ, ಪಕ್ಷದ ಬಲವನ್ನು ವಿಪಕ್ಷಗಳಿಗೆ ತೋರಿಸಲಾಗುವುದು ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ತಿಳಿಸಿದರು. ನಗರದ ಅಭಯಾಂಜನೇಯಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಬಿಜೆಪಿ ತಾಲೂಕು ಘಟಕ ಮಂಗಳವಾರ ಹಮ್ಮಿಕೊಂಡಿದ್ದ ಮಂಡಲ ಕಾರ್ಯಕಾರಿಣಿ, ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಳಗೊಂಡಂತೆ ಕೇಂದ್ರ, ರಾಜ್ಯ ಸಚಿವರು, ಸಂಸದ, ಶಾಸಕರು ಪಾಲ್ಗೊಳ್ಳಿದ್ದಾರೆ. ಬಹಳ ಹಳೆಯ ಪಕ್ಷವಾದ ಕಾಂಗ್ರೆಸ್‌ನಿಂದ ಕತ್ತೆ ನಿಂತರೂ ಗೆಲ್ಲುತ್ತದೆ ಎನ್ನುವ ಮಾತು ಸುಳ್ಳಾಗಿದೆ. ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲುತ್ತಾರೆ ಎಂಬುದಕ್ಕೆ ನಮ್ಮ ಜಿಲ್ಲೆ ಸಾಕ್ಷಿಯಾಗಿದೆ. ಬಿಜೆಪಿ ಅಭಿವೃದ್ಧಿ ಪರ ಕೆಲಸ ಮಾಡುವ ಪಕ್ಷವಾಗಿದ್ದು, ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಜನ ಮತ್ತೊಮ್ಮೆ ಆಶೀರ್ವಾದ ಮಾಡಿ, ಅಧಿಕಾರಕ್ಕೆ ತರಲಿದ್ದಾರೆ ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ಮುರಾರಿಗೌಡ, ಮುಖಂಡರಾದ ರಾಮನಾಯ್ಕ, ಉಡೇಗೋಳ್ ಖಾಜಪ್ಪ, ನಾಗನಗೌಡ, ಮಾರೆಪ್ಪ, ಬಿ.ಮಂಜುನಾಥ, ಕೆ.ಕ್ರಿಷ್ಣ, ಉರುಕುಂದ, ಯು.ಯಂಕೋಬ, ಮಾರೆಪ್ಪ, ಮಲ್ಲಿಕಾರ್ಜುನ ಮತ್ತು ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net