ಅಭಿವೃದ್ಧಿಗಾಗಿ ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನ

Siraguppa Child Friendly Village Campaign
ಸಿರಗುಪ್ಪ ಸಮೀಪದ ಹಳೇಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಕಾರ್ಯಕ್ರಮಕ್ಕೆ ಪಿಡಿಒ ಬಿ.ರಾಜೇಶ್ವರಿ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷ ಕೆ.ವೀರೇಶ, ಸದಸ್ಯ ಜಟ್ಟಿ ರಾಮಪ್ಪ, ಎಸ್ಡಿಎಂಸಿ ಅಧ್ಯಕ್ಷ ಜಿ.ರಾಮ, ಸಿಆರ್‌ಪಿ ತಿಮ್ಮನಗೌಡ, ಮುಖ್ಯಶಿಕ್ಷಕ ಚನ್ನಬಸವ, ಸಿಬ್ಬಂದಿ ಇದ್ದರು.
Published on

ಸಿರಗುಪ್ಪ: ಮಕ್ಕಳ ಪರಿಸ್ಥಿತಿಯನ್ನು ತಳಮಟ್ಟದಿಂದಲೇ ಗಮನಿಸಿ ಸುಧಾರಣಾ ಕ್ರಮ ಕೈಗೊಂಡು ಸರ್ವತೋಮುಖ ಅಭಿವೃದ್ಧಿಗಾಗಿ ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಪಿಡಿಒ ಬಿ.ರಾಜೇಶ್ವರಿ ಹೇಳಿದರು.

ತಾಲೂಕಿನ ಹಳೇಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಪಂನಿಂದ ಗುರುವಾರ ಹಮ್ಮಿಕೊಂಡಿದ್ದ ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ವಿಶೇಷ ಗ್ರಾಮ ಸಭೆ, ಜನನ ನೋಂದಣಿ, ಪೌಷ್ಟಿಕ ಕುರಿತು ಜಾಗೃತಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಅಭಿಯಾನ, ಕ್ರೀಡಾಕೂಟಗಳು, ಸಾಂಸ್ಕೃತಿಕ ಚಟುವಟಿಕೆ ಆಯೋಜಿಸಲಾಗುತ್ತದೆ ಎಂದು ಹೇಳಿದರು.

ಸಿದ್ದಪ್ಪ ನಗರದ ಸರ್ಕಾರಿ ಶಾಲಾ ಮಕ್ಕಳು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸುವಂತೆ ಪಿಡಿಒಗೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಿಡಿಒ ಈಗಾಗಲೇ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ಎರಡು ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ ದೊರಕಿದೆ. ಸದ್ಯದಲ್ಲೇ ಕಾಮಗಾರಿ ಕಾರ್ಯ ಪ್ರಾರಂಭವಾಗುತ್ತದೆ. 15ನೇ ಹಣಕಾಸಿನ ಕ್ರಿಯಾ ಯೋಜನೆಯಲ್ಲಿ ಕಂಪ್ಯೂಟರ್ ಸೌಲಭ್ಯ ಮತ್ತು ಶುದ್ಧ ಕುಡಿಯುವ ನೀರಿನ ಫಿಲ್ಟರ್ ಒದಗಿಸಿಕೊಡುತ್ತೇವೆಂದು, ಭರವಸೆ ನೀಡಿದರು.

ಗ್ರಾಪಂ ಅಧ್ಯಕ್ಷ ಕೆ.ವೀರೇಶ, ಸದಸ್ಯ ಜಟ್ಟಿ ರಾಮಪ್ಪ, ಎಸ್ಡಿಎಂಸಿ ಅಧ್ಯಕ್ಷ ಜಿ.ರಾಮ, ಸಿಆರ್‌ಪಿ ತಿಮ್ಮನಗೌಡ, ಮುಖ್ಯಶಿಕ್ಷಕ ಚನ್ನಬಸವ, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net