ಸಿಎಂ ಬಳಿಗೆ ರೈತರ ನಿಯೋಗ

27072022 siraguppa
Published on

ಸಿರಗುಪ್ಪ: ತಾಲೂಕಿನಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತವಾಗಿ ನೀಡುವ ವಿದ್ಯುತ್ ಪೂರೈಕೆ ಅವಧಿ ಹೆಚ್ಚಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿಗೆ ತಾಲೂಕಿನ ರೈತರ ನಿಯೋಗವನ್ನು ಶೀಘ್ರ ಕರೆದುಕೊಂಡು ಹೋಗಲಾಗುವುದು ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ಹೇಳಿದರು.
ಎವಿಎಸ್ ಕಲ್ಯಾಣ ಮಂಟಪದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಹಾಗೂ ವಿದ್ಯುತ್ ಇಲಾಖೆಯಿಂದ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಬುಧವಾರ ಆಯೋಜಿಸಿದ್ದ ಉಜ್ವಲ ಭಾರತ-ಉಜ್ವಲ ಭವಿಷ್ಯ ಇಂಧನ 2047 ವಿದ್ಯುತ್ ಮಹೋತ್ಸವದಲ್ಲಿ ಮಾತನಾಡಿದರು.
ನೈಸರ್ಗಿಕವಾಗಿ ವಿದ್ಯುತ್ ಉತ್ಪಾದನೆ ಮಾಡುವ ಸೋಲಾರ್ ವಿದ್ಯುತ್‌ನ ಬಳಕೆಯತ್ತ ಕೈಗಾರಿಕೆಗಳನ್ನು ಮುನ್ನಡೆಸಲಾಗುತ್ತಿದೆ. ಜತೆಗೆ ಬಿಪಿಎಲ್ ಪಡಿತರ ಕಾರ್ಡ್ ಹೊಂದಿದ ಕುಟುಂಬಕ್ಕೆ 75 ಯೂನಿಟ್‌ವರೆಗೆ ವಿದ್ಯುತ್ ಉಚಿತ ಪೂರೈಕೆ ಮಾಡಲಾಗುವುದು. ಏತ ನೀರಾವರಿಗೆ ವಿದ್ಯುತ್ ಅವಶ್ಯಕತೆ ಇದೆ. ವಿದ್ಯುತ್ ಬೆಲೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಸಿಎಂ ಬಳಿ ನಿಯೋಗವನ್ನು ಕರೆದುಕೊಂಡು ಹೋಗಿ 3.75 ರೂ. ಯೂನಿಟ್ ದರವನ್ನು 2ರೂ.ಗೆ ಇಳಿಸಲು, ಜತೆಗೆ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಈಗಿರುವ 7 ತಾಸು ವಿದ್ಯುತ್ ಪೂರೈಕೆ ಸಮಯವನ್ನು 8 ತಾಸಿಗೆ ಹೆಚ್ಚಿಸಲು ಒತ್ತಾಯಸಿಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net