ಬಿಜೆಪಿಯಿಂದ ಬಡತನ ನಿರ್ಮೂಲನೆ ಅಸಾಧ್ಯ; ಪೂರ್ವ ಸಿದ್ಧತಾ ಸಭೆಯಲ್ಲಿ ಮಾಜಿ ಸಂಸದ ಉಗ್ರಪ್ಪ ಟೀಕೆ

25092022 siraguppa congress meeting
Published on

ಸಿರಗುಪ್ಪ: ನಗರದ ಶ್ರೀ ಆಭಯಾಂಜನೇಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಸಿರಗುಪ್ಪ ಮತ್ತು ತೆಕ್ಕಲಕೋಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತ ಜೋಡೋ ಐಕ್ಯತಾ ಪಾದಯಾತ್ರೆಯ ಪೂರ್ವಭಾವಿ ಸಭೆ ಶನಿವಾರ ನಡೆಯಿತು.ಮಾಜಿ ಸಂಸದ ಉಗ್ರಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿವಾಗಿದ್ದು, ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರವರಗೆ ಭಾರತ ಐಕ್ಯತಾ ಯಾತ್ರೆಯನ್ನು ಆರಂಭಿಸಿದ್ದಾರೆ. ಅ.19ರಂದು ಬಳ್ಳಾರಿ ಜಿಲ್ಲೆಗೂ ಯಾತ್ರೆ ಬರಲಿದೆ. ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, 5ಲಕ್ಷ ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದರು.

ಬಿಜೆಪಿ ಸರ್ಕಾರದಿಂದ ದೇಶದ ಬಡತನ ನಿರ್ಮೂಲನೆ ಮಾಡಲು ಆಗುತ್ತಿಲ್ಲ. ಈ ಸರ್ಕಾರದಿಂದ ದೊಡ್ಡ ದೊಡ್ಡ ಕಂಪನಿಗಳು ಶ್ರೀಮಂತವಾಗುತ್ತಿವೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತಂದು ಸಾಮಾನ್ಯ ಜನರ ಬದುಕು ಹಸನ ಮಾಡಲು ಕಾಂಗ್ರೆಸ್ ಶ್ರಮಿಸಲಿದೆ ಎಂದರು.

ಮಲ್ಲಿಕಾರ್ಜುನ, ಹನುಮಂತಪ್ಪ, ಎಸ್.ನರೇಂದ್ರಸಿಂಹ, ಮುರುಳಿ ಕೃಷ್ಣ, ಕರಿಬಸಪ್ಪ, ಬಸಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net