ರಾರಾವಿ ಸೇತುವೆ ಶೀಘ್ರ ಲೋಕಾರ್ಪಣೆ

03 siraguppa 02
Published on

ಸಿರಗುಪ್ಪ: ಕರ್ನಾಟಕ ಮತ್ತು ನೆರೆಯ ಸೀಮಾಂಧ್ರ ಪ್ರದೇಶಕ್ಕೆ ಕೊಂಡಿಯಂತೆ 40 ಕೋಟಿ ರೂ. ವೆಚ್ಚದಲ್ಲಿ ರಾರಾವಿ ಸೇತುವೆ ನಿರ್ಮಿಸಲಾಗಿದ್ದು, ಬಾಕಿ ಸಣ್ಣ ಪುಟ್ಟ ಕಾಮಗಾರಿಗಳನ್ನು ಪೂರ್ಣಗೊಳಿಸಿ ಶೀಘ್ರವೇ ಲೋಕಾರ್ಪಣೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದರು.

ತಾಲೂಕಿನ ರಾರಾವಿ ಸಮೀಪದ ವೇದಾವತಿ ಹಗರಿ ನದಿಗೆ ನಿರ್ಮಿಸುತ್ತಿರುವ ಸೇತುವೆಯ ಬಾಕಿ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಅನೇಕ ವರ್ಷಗಳ ಕನಸಾಗಿರುವ ರಾರಾವಿ ಸೇತುವೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಅಲ್ಪಸ್ವಲ್ಪ ಕೆಲಸ ಉಳಿದಿದ್ದು, ಶೀಘ್ರವೇ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾಮಗಾರಿ ಮುಗಿದ ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿ ಸೇತುವೆ ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net