ಪುರುಷರಿಗೆ ಸರಿಸಮಾನವಾಗಿ ದುಡಿಯುವ ಮಹಿಳೆಯರ ಸಾಧನೆ ಶ್ಲಾಘನೀಯ ಎಂದು ಬಣ್ಣಿಸಿದ ಶಾಸಕ ಎಂ.ಎಸ್.ಸೋಮಲಿಂಗಪ್ಪ

120322 Siraguppa Womens Day
ಸಿರಗುಪ್ಪದಲ್ಲಿ ಶನಿವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
Published on

ಸಿರಗುಪ್ಪ: ಇಂದಿನ ಮಹಿಳೆಯರು ಮಕ್ಕಳ ಪಾಲನೆ ಪೋಷಣೆ ಜತೆಗೆ ವ್ಯವಹಾರ, ಕೃಷಿ, ದೇಶದ ರಕ್ಷಣೆ, ಉದ್ಯೋಗಗಳಲ್ಲಿ ಪುರುಷರಿಗೆ ಸರಿಸಮಾನವಾಗಿ ದುಡಿಯುತ್ತಿದ್ದು, ಮಹಿಳೆಯರು ಅಬಲೆಯರಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಮಹಿಳೆಯರ ಸಾಧನೆ ಶ್ಲಾಘನೀಯ ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ಹೇಳಿದರು.

ನಗರದ ವ್ಯಾಯಾಮ ಶಾಲೆ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶನಿವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆಯರು ತಮ್ಮ ತಾಳ್ಮೆಯ ಗುಣದಿಂದ ಮಕ್ಕಳ, ತಂದೆ, ತಾಯಂದಿರ ಪ್ರೀತಿಯನ್ನು ಗಳಿಸುವ ಜತೆಗೆ ತಮ್ಮ ಸಹೋದ್ಯೋಗಿಗಳೊಂದಿಗೂ ಅನ್ಯೋನ್ಯವಾಗಿದ್ದು, ತಮಗೆ ವಹಿಸಿದ ಕೆಲಸಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತಾರೆ ಎಂದರು.

ತಹಸೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ಸಿಡಿಪಿಒ ಎ.ಕೆ.ಜಲಾಲಪ್ಪ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ತಾಪಂ ಇಒ ಶಿವಪ್ಪ ಸುಬೇದಾರ್, ನಗರಸಭೆ ಅಧ್ಯಕ್ಷ ಸುಶೀಲಮ್ಮ ವೆಂಕಟರಾಮರೆಡ್ಡಿ, ಡಾ.ಗಂಗಮ್ಮ, ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹ್ಮದ್, ಬಿಸಿಎಂ ಇಲಾಖೆ ಅಧಿಕಾರಿ ಎ.ಗಾದಿಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಸಿದ್ದಯ್ಯ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net