ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಣೆ

09082022 siraguppa news
Published on

ಶಾಸಕ ಎಂ.ಎಸ್. ಸೋಮಲಿಂಗಪ್ಪ ಅವರಿಂದ ಹಂಚಿಕೆ

ಸಿರಗುಪ್ಪ: ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ಸರ್ಕಾರಿ ಬಗರ್‌ಹುಕುಂ ಜಮೀನನ್ನು ಸಕ್ರಮಗೊಳಿಸಿ ಅರ್ಹ ಫಲಾನುಭವಿಗಳಿಗೆ ಭೂಮಿಯ ಹಕ್ಕು ಪತ್ರ ನೀಡಲಾಗಿದೆ ಎಂದು ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಭೂ ಸಕ್ರಮೀಕರಣ ಸಮಿತಿ ಹಮ್ಮಿಕೊಂಡಿದ್ದ ಸಭೆಯಲ್ಲಿ ತಾಲೂಕಿನ ಹಿರೇಹಾಳು ಗ್ರಾಮದ ಅರ್ಹ ರೈತರಿಗೆ ಸಕ್ರಮ ಸಾಗುವಳಿ ಆದೇಶ ಪ್ರಗಳನ್ನು ವಿತರಿಸಿ ಮಾತನಾಡಿದರು. ಬಗರ್‌ಹುಕುಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ಭೂ ರಹಿತರ ಮಾಹಿತಿ ಪಡೆದಿದ್ದ ಸರ್ಕಾರ, ಭೂ ಸಕ್ರಮೀಕರಣ ಸಮಿತಿಯಿಂದ ಗ್ರಾಮದ ಬಗರ್‌ಹುಕುಂ ಜಮೀನನ್ನು ಸಕ್ರಮಗೊಳಿಸಿದ್ದರಿಂದ ಅರ್ಹ ರೈತರಿಗೆ ಆದೇಶ ಪತ್ರಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರದಿಂದ ಜಾರಿಗೊಳ್ಳುವ ಯೋಜನೆಗಳ ಅನುಷ್ಠಾನಕ್ಕೆ ಬಡ ರೈತರಿಂದ ಯಾವ ಅಧಿಕಾರಿಯೂ ಹಣ ಪಡೆಯುವಂತಿಲ್ಲ. ಒಂದು ವೇಳೆ ಹಣಕ್ಕೆ ಬೇಡಿಕೆ ಇಟ್ಟಲ್ಲಿ ಮಾಹಿತಿ ನೀಡುವಂತೆ ರೈತರಿಗೆ ತಿಳಿಸಿದರು.

ತಹಸೀಲ್ದಾರ್ ಎನ್.ಆರ್. ಮಂಜುನಾಥಸ್ವಾಮಿ, ಭೂ ನ್ಯಾಯಮಂಡಳಿ ಸದಸ್ಯ ಗಂಗಪ್ಪ, ರೈತ ಮುಖಂಡರಾದ ವಿರೂಪಾಕ್ಷಿ, ನೀಲಕಂಠ, ಲಕ್ಷ್ಮೀ, ಕಂದಾಯ ನಿರೀಕ್ಷಕ ಶೇಕ್ಷಾವಲಿ ಹಾಗೂ ರೈತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net