ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು; ಸಿರಗುಪ್ಪ ಶಾಸಕ ಎಮ್.ಎಸ್.ಸೋಮಲಿಂಗಪ್ಪ ಮಾಹಿತಿ

25102022 siraguppa water projecrt
Published on

ಜಲ ಜೀವನ ಮಿಷನ್ ಕಾಮಗಾರಿಗೆ ಭೂಮಿ ಪೂಜೆ

ಸಿರಗುಪ್ಪ: ಪ್ರತಿ ಮನೆಗೆ ಶುದ್ಧ ಕುಡಿಯುವ ನೀರೊದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮನೆ ಮನೆಗೆ ಗಂಗೆ ಪೂರೈಕೆ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ತಿಳಿಸಿದರು.

ತಾಲೂಕಿನ ಮಾಟೂರು ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜಲ ಜೀವನ ಮಿಷನ್ ಯೋಜನೆಯಡಿ 2 ಕೋಟಿ ರೂ.ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ತಾಲೂಕಿನ 27 ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯನ್ನು ಜಾರಿಗೆ ತರಲಾಗುವುದು. ಮೊದಲ ಹಂತದಲ್ಲಿ ಈ ಯೋಜನೆಯನ್ನು 40 ಹಳ್ಳಿಗಳಲ್ಲಿ ಜಾರಿಗೆ ತರಲಾಗಿದೆ. ಮುಂಬರುವ ದಿನಗಳಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರೊದಗಿಸುವ ಜತೆಗೆ ಜಲ ಮೂಲಗಳನ್ನು ಕಾಪಾಡಿ, ಮುಂದಿನ ಪೀಳಿಗೆಗೆ ನೀರುಳಿಸುವುದು ಮತ್ತು ನೀರಿನ ಮಹತ್ವವನ್ನು ತಿಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು ನಂತರ ತಾಲೂಕಿನ ಅಲಬನೂರು, ನಾಗರಹಾಳು, ಬೀರಳ್ಳಿ ಗ್ರಾಮಗಳಲ್ಲೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net