ಸಿರಗುಪ್ಪ ಶಾಸಕ ಸೋಮಲಿಂಗಪ್ಪಗೆ ಸಚಿವ ಸ್ಥಾನ ನೀಡುವಂತೆ ತಾಲೂಕು ಬಿಜೆಪಿ ಅಧ್ಯಕ್ಷ ಆರ್.ಸಿ.ಪಂಪನಗೌಡ ಒತ್ತಾಯ

Somalingappa Meet Nalinkumar Kadil
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರನ್ನು ಸಿರಗುಪ್ಪ ತಾಲೂಕಿನ ಶಾಸಕ ಎಂ.ಎಸ್.ಸೋಮಲಿಂಗಪ್ಪ ಮತ್ತು ಬಿಜೆಪಿ ತಾಲೂಕು ಅಧ್ಯಕ್ಷ ಆರ್.ಸಿ.ಪಂಪನಗೌಡ ಹಾಗೂ ಬೆಂಬಲಿಗರು ಭೇಟಿ ಮಾಡಿ ಸಚಿವ ಸ್ಥಾನದ ಕುರಿತು ಚರ್ಚಿಸಿದರು.
Published on

ಸಿರಗುಪ್ಪ: ಮೂರುಬಾರಿ ಶಾಸಕರಾಗಿ ಹಿಂದುಳಿದ ತಾಲೂಕಿನ ಅಭಿವೃದ್ಧಿಗೆ ಮತ್ತು ಪಕ್ಷದ ಸಂಘಟನೆಗೆ ಶ್ರಮಿಸುತ್ತಿರುವ ಶಾಸಕ ಎಂ.ಎಸ್.ಸೋಮಲಿಂಗಪ್ಪಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ರನ್ನು ತಾಲೂಕು ಬಿಜೆಪಿ ಅಧ್ಯಕ್ಷ ಆರ್.ಸಿ.ಪಂಪನಗೌಡ ಒತ್ತಾಯಿಸಿದರು.

ಕಟೀಲ್ ಅವರನ್ನು ಬುಧವಾರ ಭೇಟಿ ಮಾಡಿದ ಬಳಿಕ ವಿಜಯವಾಣಿಯೊಂದಿಗೆ ಮಾತನಾಡಿ, ಕೇವಲ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರೆ ಶಾಸಕರಾಗುತ್ತಿದ್ದ ಸಿರಗುಪ್ಪ ಕ್ಷೇತ್ರದಲ್ಲಿ ಸೋಮಲಿಂಗಪ್ಪ ಅವರು ಬಿಜೆಪಿಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಿಂದುಳಿದ ತಾಲೂಕಿನ ಅಭಿವೃದ್ಧಿಗೆ ಸದಾ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ತಾಲೂಕಿನ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ದೃಷ್ಠಿಯಿಂದ ಸಚಿವ ಸ್ಥಾನ ನೀಡಿ ಶೈಕ್ಷಣಿಕವಾಗಿ ಹಿಂದುಳಿದ ತಾಲೂಕಿನ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ತಾಲೂಕಿನಲ್ಲಿಯೇ ಪಕ್ಷ ಸಂಘಟನೆಯ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಮೂಲಕ ಸಂಘಟನೆ ಹಾಗೂ ತಾಲೂಕಿನ ರೈತರ ಹಿತ ದೃಷ್ಠಿಯಿಂದ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net