ಕಾಮಗಾರಿ ಕಳಪೆಯಾದರೆ ಕ್ರಮ ನಿಶ್ಚಿತ; ಗುತ್ತಿಗೆದಾರರಿಗೆ ಶಾಸಕ ಸೋಮಲಿಂಗಪ್ಪ ಎಚ್ಚರಿಕೆ

27112022 siraguppa mla somalingappa bhoomipuja
Published on

ಸಿರಗುಪ್ಪ: ನಗರ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಸ್ತೆ, ಚರಂಡಿ ಮುಂತಾದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಕೊಟ್ಯಂತರ ರೂ. ವ್ಯಯಿಸುತ್ತಿದ್ದು, ಗುತ್ತಿಗೆದಾರರು ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ತಿಳಿಸಿದರು.

ತಾಲೂಕಿನ ಬೂದುಗುಪ್ಪ ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿ, ಸರ್ಕಾರದ ಅನುದಾನದಲ್ಲಿ ನಿರ್ಮಿಸುವ ರಸ್ತೆಗಳಲ್ಲಿ ಗುಣಮಟ್ಟ ಕೊರತೆಯಿದ್ದು ಬೇಗ ಹಾಳಾಗುತ್ತಿವೆ. ಕಳಪೆ ಕಾಮಗಾರಿ ಮಾಡಿದರೆ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಿರಗುಪ್ಪ ನಗರದ ವಿವಿಧ ವಾರ್ಡ್‌ಗಳಲ್ಲಿ ನಗರೋತ್ಥಾನದಡಿ 4.6 ಕೋಟಿ ರೂ.ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ, ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ, ನಾಡಂಗ ಗ್ರಾಮದಲ್ಲಿ 25 ಲಕ್ಷ ರೂ.ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಮುಖಂಡರಾದ ಗೋಪಾಲ, ಹಸನ್‌ಸಾಬ್, ಮಾರೆಣ್ಣ, ರಾಮಕೃಷ್ಣ, ವೀರೇಶ, ಪಿಡ್ಡಯ್ಯ, ಹನುಮಂತ, ಗೋಪಿಚಂದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net