ಪೌರ ಕಾರ್ಮಿಕರು ಆರೋಗ್ಯದ ಕಡೆ ಗಮನಹರಿಸಲಿ

siraguppa Health Checkup Camp
ಸಿರಗುಪ್ಪ ನಗರಸಭೆಯಲ್ಲಿ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮದ ಪೋಸ್ಟರ್ ಅನ್ನು ಪೌರಾಯುಕ್ತ ಜೀವನ್ ಕಟ್ಟಿಮನಿ ಬಿಡುಗಡೆಗೊಳಿಸಿದರು. ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾದ ಈರಣ್ಣ ನಾಯಕ, ಆನಂದ ಅಬ್ಬಿಗೇರಿ,, ಪ್ರಯೋಗಾಲಯ ತಂತ್ರಜ್ಞರಾದ ಜಯಲಕ್ಷ್ಮೀ, ಜಯಂತಿ, ಜ್ಯೋತಿ, ಬೇಬಿ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಎಚ್.ರಂಗಸ್ವಾಮಿ ಇತರರಿದ್ದರು.
Published on

ಸಿರಗುಪ್ಪ: ನಗರವನ್ನು ಸ್ವಚ್ಛವಾಗಿಡುವ ಪೌರ ಕಾರ್ಮಿಕರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ನಗರಸಭೆ ಪೌರಾಯುಕ್ತ ಜೀವನ್ ಕಟ್ಟಿಮನಿ ಹೇಳಿದರು.

ನಗರಸಭೆ ಕಚೇರಿ ಆವರಣದಲ್ಲಿ ಶುಕ್ರವಾರ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ಮತ್ತು ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.

ಪೌರ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆಯೊಂದಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ. ನಗರ ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ. ಪೌರಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಡಾ.ಜಗದೀಶ ಪಾಟೀಲ್ ಮಾತನಾಡಿ, ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದ ವೇಳೆ ಸುರಕ್ಷಾ ಸಾಮಗ್ರಿ ಬಳಸಬೇಕು. ಇದರಿಂದ ಅನೇಕ ರೋಗಗಳು ಹರಡುವುದನ್ನು ತಡೆಯಬಹುದಾಗಿದೆ ಎಂದು ತಿಳಿಸಿದರು.

ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾದ ಈರಣ್ಣ ನಾಯಕ, ಆನಂದ ಅಬ್ಬಿಗೇರಿ, ಪ್ರಯೋಗಾಲಯ ತಂತ್ರಜ್ಞರಾದ ಜಯಲಕ್ಷ್ಮೀ, ಜಯಂತಿ, ಜ್ಯೋತಿ, ಬೇಬಿ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಎಚ್.ರಂಗಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net