

ಸಿರಗುಪ್ಪ: ನರೇಗಾ ಕೆಲಸ ಮಾಡುವ ಸ್ಥಳದಲ್ಲಿ ಕುಡಿವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಲು ಒತ್ತಾಯಿಸಿ ರಾರಾವಿ ಗ್ರಾಮ ಪಂಚಾಯಿತಿಗೆ ಕೂಲಿಕಾರರು ಇತ್ತೀಚೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ತಾಲೂಕಿನಾದ್ಯಂತ ಏ.1 ರಿಂದ ನರೇಗಾ ಕಾಮಗಾರಿಗಳು ಆರಂಭವಾಗಿವೆ. ಆದರೆ, ಬಿರು ಬೇಸಿಗೆಯಲ್ಲೂ ಕಾಮಗಾರಿ ಸ್ಥಳದಲ್ಲಿ ಕುಡಿವ ನೀರು, ನೆರಳು ಮತ್ತು ಪ್ರಥಮ ಚಿಕಿತ್ಸೆ ಸೌಕರ್ಯಗಳನ್ನು ಕಲ್ಪಿಸುತ್ತಿಲ್ಲ. ಇದರಿಂದ ಕೂಲಿಕಾರರು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ‘ಹೆಚ್ಚು ಮಾತನಾಡಿದರೆ 2 ಗಂಟೆವರೆಗೆ ಬಿಸಿಲಿನಲ್ಲಿ ಕೆಲಸ ಮಾಡಬೇಕಾಗುತ್ತದೆ’ ಎಂದು ಅಧಿಕಾರಿಗಳು ಬೆದರಿಸುತ್ತಿದ್ದಾರೆ. ಕೂಲಿಕಾರರಲ್ಲಿ ವೃದ್ಧರು ಇದ್ದಾರೆ. ಅವರು ಈ ಬಿಸಿಲಿನಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋಟ್: ಉದ್ಯೋಗ ಖಾತ್ರಿ ಕೆಲಸ ಮಾಡುವ ಸ್ಥಳದಲ್ಲಿ ಕುಡಿವ ನೀರು, ನೆರಳಿನ ವ್ಯವಸ್ಥೆ ಮಾಡಲು ಈಗಾಗಲೇ ಎಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮತ್ತೊಮ್ಮೆ ಪರಿಶೀಲಿಸಲಾಗುವುದು.
> ಮನೋಹರ. ಸಹಾಯಕ ನಿರ್ದೇಶಕ ನರೇಗಾ ಯೋಜನೆ ತಾಪಂ ಸಿರಗುಪ್ಪ