

ಸಿರಗುಪ್ಪ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೌಲಭ್ಯಗಳನ್ನು ಸಾಮಾನ್ಯ ಜನರಿಗೆ ತಲುಪಿಸಲು ಶ್ರಮವಹಿಸಿ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳಿಗೆ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ್ ಜೆ. ಸೂಚಿಸಿದರು. ಪಟ್ಟಣದ ಅಭಯ ಆಂಜನೇಯ ದೇವಸ್ಥಾನದ ಸಭಾ ಭವನದಲ್ಲಿ ಯೋಜನೆಯ ತಾಲೂಕಿನ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಗುರುವಾರ ಮಾತನಾಡಿದರು. ಡಾ.ವೀರೇಂದ್ರ ಹೆಗ್ಗಡೆ ಅವರು ಗ್ರಾಮ ಮಟ್ಟದಲ್ಲಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಜನರು ಜೀವನ ಮಟ್ಟ ಉತ್ತಮಗೊಳಿಸಿಕೊಳ್ಳಲು ಕಾರ್ಯಕ್ರಮಗಳನ್ನು ರೂಪಿಸಿ ಸ್ವ ಸಹಾಯ ಸಂಘಗಳ ಸಂಘಟನೆ, ಸ್ವ ಉದ್ಯೋಗ ತರಬೇತಿ, ಜ್ಞಾನವಿಕಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.