ಸಿರಗುಪ್ಪ ತಾಲೂಕಿನ ಬೆಂಚೆಕ್ಯಾಂಪ್ ಹತ್ತಿರ ಟಾಟಾ ಏಸ್ ಪಲ್ಟಿಯಾಗಿ 34 ಜನಕ್ಕೆ ಗಾಯ

21092022 bellary tata ace accident
Published on

ಸಿರಗುಪ್ಪ(ಬಳ್ಳಾರಿ): ತಾಲೂಕಿನ ಬೆಂಚೆಕ್ಯಾಂಪ್ ಹತ್ತಿರ ಟಾಟಾಏಸ್ ವಾಹನ ಬುಧವಾರ ಪಲ್ಟಿಯಾಗಿ 34 ಜನ ಕೃಷಿ ಕಾರ್ಮಿಕರು ಗಾಯಗೊಂಡಿದ್ದು, ಈ ಪೈಕಿ 25 ಜನರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಂಭೀರವಾಗಿ ಗಾಯಗಳಾಗಿರುವ ಐವರ ಪೈಕಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ತಾಲೂಕಿನ ಕೆಂಚನಗುಡ್ಡ ಗ್ರಾಮದಿಂದ ಹಿರೇಹಾಳು ಗ್ರಾಮಕ್ಕೆ ಕೃಷಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ರಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ, ನಗರದ ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ನಂತರ 25 ಜನರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಈರಣ್ಣ ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಜನಾರ್ದನ ಭೇಟಿ ನೀಡಿ, ನಂತರ ಆಸ್ಪತ್ರೆಗೆ ಬಂದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಗುರುಗಡೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟಾಟಾ ಏಸ್ ಪಲ್ಟಿಯಾಗಿದೆ ಎನ್ನಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net