ಸಿರಾಜ್ ಶೇಕ್ ವಿರುದ್ಧ ಕ್ರಮಕ್ಕೆ ಆಗ್ರಹ

Untitled design (12)
ಗಂಗಾವತಿ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಗೋರಸೇನಾ ಜಿಲ್ಲಾ ಘಟಕದ ಸದಸ್ಯರು ಮನವಿ ಸಲ್ಲಿಸಿದರು. ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣನಾಯ್ಕ ಮತ್ತು ಗೋರ್ ಸೇನಾ ರಾಜ್ಯ ಉಪಾಧ್ಯಕ್ಷ ಶಿವಪ್ಪ ಜಾಗೋಗೋರ್, ಪದಾಧಿಕಾರಿಗಳಾದ ವೆಂಕಟೇಶ ಜಾಧವ್, ಪಾಂಡುನಾಯ್ಕ, ಮಂಜುನಾಥ, ಸಂತೋಷ, ಅಮರೇಶ ಇನ್ನಿತರರಿದ್ದರು.
Published on

ಗಂಗಾವತಿ: ಕೆಎಂಎಫ್ ಅಧ್ಯಕ್ಷ ಎಸ್.ಭೀಮಾನಾಯ್ಕರನ್ನು ನಿಂದಿಸಿದ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷ ಸಿರಾಜ್ ಶೇಕ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗೋರಸೇನಾ ಜಿಲ್ಲಾ ಘಟಕದ ಸದಸ್ಯರು ನಗರದ ತಹಸಿಲ್ ಕಚೇರಿ ಮುಂಭಾಗ ಸೋಮವಾರ ಪ್ರತಿಭಟಿನೆ ನಡೆಸಿದರು.

ಶೋಷಿತ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ

ಎಸ್.ಭೀಮಾನಾಯ್ಕ ಸೇರಿ ಬಂಜಾರ ಸಮುದಾಯದ ಮಹಿಳೆಯರಿಗೆ ಅವಮಾನವಾಗುವಂತೆ ಸಿರಾಜ್ ಶೇಕ್ ಮಾತನಾಡಿದ್ದಾರೆ. ಇದರಿಂದ ಶೋಷಿತ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಸಿರಾಜ್ ಶೇಕ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣನಾಯ್ಕ ಮತ್ತು ಗೋರ್ ಸೇನಾ ರಾಜ್ಯ ಉಪಾಧ್ಯಕ್ಷ ಶಿವಪ್ಪ ಜಾಗೋಗೋರ್ ಎಚ್ಚರಿಸಿದರು. ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಸಲ್ಲಿಸಿದರು.

ಪದಾಧಿಕಾರಿಗಳಾದ ಲೋಕೇಶ, ಕೃಷ್ಣನಾಯ್ಕ, ಹನುಮಂತ, ಯಮನೂರ ಮಂಜುನಾಥ, ಶಿವಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net