

ಸಿರವಾರ: ವಾತಾವರಣವನ್ನು ಸ್ವಚ್ಛ ಮತ್ತು ಸುಂದರವನ್ನಾಗಿಸಲು ಪೌರ ಕಾರ್ಮಿಕರ ಸೇವೆಯೇ ಕಾರಣ ಎಂದು ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.
ಪಟ್ಟಣದಲ್ಲಿ ಪಪಂನಿಂದ ಶನಿವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿದಿನ ಬೆಳಗ್ಗೆ ಬೇಗನೆ ಎದ್ದು ತಮ್ಮ ಮನೆಯ ಕಾರ್ಯಗಳನ್ನು ಬದಿಗಿಟ್ಟು, ಪಟ್ಟಣವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ನಿರಂತರ ಕೆಲಸ ಮಾಡುವ ಪೌರ ಕಾರ್ಮಿಕರು ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ.
ಸಮಾಜದ ಆರೋಗ್ಯ ಕಾಪಾಡುವುದರ ಜತೆಗೆ ನಿಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸಬೇಕು. ಪೌರ ಕಾರ್ಮಿಕರನ್ನು ಎಲ್ಲರೂ ಗೌರವದಿಂದ ಕಾಣಬೇಕು ಎಂದರು.
ಬಳಿಕ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಪಪಂ ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಆದೆಪ್ಪ, ತಹಸೀಲ್ದಾರ್ ಅಶೋಕ ಪವಾರ್, ಪಪಂ ಮುಖ್ಯಾಧಿಕಾರಿ ಸುರೇಶ ಶೆಟ್ಟಿ, ಪಂಚ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬ್ರಿಜೇಶ ಪಾಟೀಲ್, ನೌಕರರ ಸಂಘದ ತಾಲೂಕು ಅಧ್ಯಕ್ಷ ಆರೀಫ್ ಮಿಯಾ, ಪಪಂ ಸದಸ್ಯರಾದ ಕೃಷ್ಣ ನಾಯಕ, ಮಾರ್ಕಂಡೆಪ್ಪ, ಸಂದೀಪ್ ಪಾಟೀಲ್, ಚನ್ನಪ್ಪ ಗಡ್ಲ, ಹಸೇನ್ ಅಲೀಸಾಬ್, ಕಾಂಗ್ರೆಸ್ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರೇಣುಕಾ ಇತರರಿದ್ದರು.