ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ

28082022 sirwar health
Published on

ಸಿರವಾರ: ಆಟೋಟದಿಂದ ದೈಹಿಕ ಸಾಮರ್ಥ್ಯದ ಜತೆಗೆ ಮಾನಸಿಕ ಆರೋಗ್ಯವೂ ವೃದ್ಧಿಯಾಗುತ್ತದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ತಾಲೂಕಿನ ನವಲಕಲ್ ಗ್ರಾಮದ ಇಂದಿರಾ ಗಾಂಧಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲಾವರಣದಲ್ಲಿ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕೆಂದರು.ಕ್ರೀಡೆಯಲ್ಲಿ ಸೋತಾಗ ಹತಾಶರಾಗದೆ, ಗೆದ್ದಾಗ ಬೀಗದೆ, ಎರಡನ್ನೂ ಸಮಾನಾಗಿ ತೆಗೆದುಕೊಳ್ಳಬೇಕು. ತಾಲೂಕಿನ ಕ್ರೀಡಾಂಗಣಕ್ಕೆ 2 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು ಮುಂದಿನ ದಿನಗಳಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಹೇಳಿದರು.

ಬಿಇಒ ಚಂದ್ರಶೇಖರ ದೊಡ್ಡಮನಿ, ಜೆಡಿಎಸ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಬಲ್ಲಟಗಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಯ್ಯನಗೌಡ ಐರಡ್ಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೌನೇಶ ಹಣಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಅಧ್ಯಕ್ಷ ಮಲ್ಲೇಶಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಕೇಶವ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಚಾರ್ಯ ಶರಣಬಸಪ್ಪ, ಮಲ್ಲಿಕಾರ್ಜುನ ಜಗ್ಲಿ, ರಾಜಶೇಖರ ದಿನ್ನಿ, ಗೋಪಾಲ ನಾಯಕ ಹರವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net