ಸಮುದಾಯದ ಸಂಘಟನೆಗೆ ಕೈಜೋಡಿಸಿ, ಎನ್.ಉದಯ ಕುಮಾರ ಕರೆ

140223 Sirwara Banajiga Day
ಸಿರವಾರದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪನಾ ದಿನವನ್ನು ಸೋಮವಾರ ಸಂಜೆ ಆಚರಿಸಲಾಯಿತು.
Published on

ಸಿರವಾರ: ಬಣಜಿಗ ಸಮುದಾಯದವರು ಶ್ರಮಜೀವಿಗಳಾಗಿದ್ದು, ಆರ್ಥಿಕವಾಗಿ ಸಬಲಗೊಳ್ಳುವುದರೊಂದಿಗೆ ಸಂಘಟನೆಗೆ ಆದ್ಯತೆ ನೀಡಬೇಕೆಂದು ಸಮುದಾಯದ ಪ್ರಮುಖ ಎನ್.ಉದಯ ಕುಮಾರ ಹೇಳಿದರು.

ಪಟ್ಟಣದಲ್ಲಿ ಬಣಜಿಗ ಸಮಾಜದ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಸೋಮವಾರ ಸಂಜೆ ಮಾತನಾಡಿದರು. ಒಂದು ದಿನ ಸಂಸ್ಥಾಪನಾ ದಿನ ಆಚರಣೆ ಮಾಡಿದರೆ ಸಾಲದು. ಸಮುದಾಯದ ಪ್ರತಿಯೊಬ್ಬರೂ ಸಂಘಟಿತರಾಗಬೇಕು ಎಂದರು.

ಸಮುದಾಯದವರು ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕು. ಆರ್ಥಿಕವಾಗಿ ಹಿಂದುಳಿದವರನ್ನು ಮೇಲೆತ್ತುವ ಕೆಲಸ ಮಾಡಬೇಕು. ನಮ್ಮಲ್ಲಿರುವ ಅಂಕುಡೊಂಕುಗಳನ್ನು ತಿದ್ದಿಕೊಂಡು ಸಮುದಾಯದ ಸಂಘಟನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಉದಯ ಕುಮಾರ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net