ಅಕ್ರಮ ಸಾಗಣೆದಾರರ ವಿರುದ್ಧ ಕ್ರಮಕೈಗೊಳ್ಳಿ

16092022 sirawar Rupa Srinivas
Published on

ಸಿರವಾರ: ಪಡಿತರ ಅಕ್ಕಿ ಅಕ್ರಮ ಸಾಗಣೆದಾರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ್ ನಾಯಕ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಡಿತರ ಅಕ್ಕಿ ಅಕ್ರಮವಾಗಿ ಮಾರಾಟ ಮಾಡುವ ಕುರಿತು ಈ ಹಿಂದೆ ದಾಖಲೆ ಸಮೇತ ದೂರು ನೀಡಲಾಗಿತ್ತು. ಆದರೂ, ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಪ್ರಕರಣ ದಾಖಲು ಮಾಡಲು ಹಿಂದೇಟು ಹಾಕುತ್ತಿರುವ ಅಧಿಕಾರಿಗಳ ನಡೆ ಅನುಮಾನಗಳಿಗೆ ಎಡೆ ಮಾಡಿದೆ. ಅಕ್ರಮದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲೂಕು ಅಧ್ಯಕ್ಷ ನಾಗರಾಜ ಖಾಜನಗೌಡ, ಉಪಾಧ್ಯಕ್ಷ ಆಂಜನೇಯ ಬಿಚ್ಚಾಲಿ, ಪ್ರಧಾನ ಕಾರ್ಯದರ್ಶಿ ಶೇಖರಯ್ಯ ಸ್ವಾಮಿ ನವಲಕಲ್, ಗೋವಿಂದ, ಮಾರುತಿ ವೆಂಕಟೇಶ್, ಹನುಮಂತ, ಮಹೇಶ ಪೂಜಾರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net